Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ನಿಯಂತ್ರಣಕ್ಕೆ ಬಂತಾ ಕೋವಿಡ್: ಇಂದಿನ ಪ್ರಕರಣಗಳೆಷ್ಟು?

ಕರ್ನಾಟಕದಲ್ಲಿ ನಿಯಂತ್ರಣಕ್ಕೆ ಬಂತಾ ಕೋವಿಡ್: ಇಂದಿನ ಪ್ರಕರಣಗಳೆಷ್ಟು?
ಬೆಂಗಳೂರು , ಮಂಗಳವಾರ, 21 ಸೆಪ್ಟಂಬರ್ 2021 (07:38 IST)
ಬೆಂಗಳೂರು, ಸೆ 21 : ಕಳೆದ ಎರಡು ದಿನಗಳಿಂದ ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖಗೊಂಡಿದ್ದು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುವ ಸೂಚನೆ ದೊರೆತಿದೆ.

ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.60ರಷ್ಟಿದ್ದು, ಆದರೆ ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 3.54ರಷ್ಟಿದೆ. ಭಾನುವಾರಕ್ಕಿಂತ ಹೆಚ್ಚನ ಸಾವುಗಳು ಸಂಭವಿಸಿವೆ.
ಕರ್ನಾಟಕ ರಾಜ್ಯದಲ್ಲಿ ಇಂದು (ಸೆ.20) ಹೊಸದಾಗಿ 677 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,68,543ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 29,16,530 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಅದೇ ರೀತಿ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 24 ಜನರ ಸಾವು ಸಂಭವಿಸಿದ್ದು, ಅದರಂತೆ ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ 37,627 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 14,358 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ರಾಜಧಾನಿ ಪರಿಸ್ಥಿತಿ ಏನು?
ಬೆಂಗಳೂರಿನಲ್ಲಿ ಇಂದು ಒಂದೇ ದಿನ 213 ಜನರಿಗೆ ಕೊವಿಡ್-19 ಸೋಂಕು ದಾಖಲಾಗಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ 12,43,693ಕ್ಕೆ ಏರಿಕೆಯಾಗಿದೆ. 12,43,693 ಸೋಂಕಿತರ ಪೈಕಿ 12,20,278 ಜನರು ಗುಣಮುಖರಾಗಿದ್ದಾರೆ.
ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ ಬೆಂಗಳೂರು ನಗರದಲ್ಲಿ ಕೊರೊನಾದಿಂದ ಈವರೆಗೆ 16,096 ಜನರ ಸಾವು ಸಂಭವಿಸಿದೆ. ಇನ್ನು ಬೆಂಗಳೂರಿಲ್ಲಿ 7,318 ಕೊರೊನಾ ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಕೊರೊನಾ ಸೋಂಕಿನ ವಿವರ
ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 28, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 213, ಬೀದರ್ 1, ಚಾಮರಾಜನಗರ 5, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 35, ಚಿತ್ರದುರ್ಗ 4, ದಕ್ಷಿಣ ಕನ್ನಡ 102, ದಾವಣಗೆರೆ 3, ಧಾರವಾಡ 5, ಗದಗ 2, ಹಾಸನ 37, ಹಾವೇರಿ 0, ಕಲಬುರಗಿ 3, ಕೊಡಗು 29, ಕೋಲಾರ 23, ಕೊಪ್ಪಳ 0, ಮಂಡ್ಯ 5, ಮೈಸೂರು 37, ರಾಯಚೂರು 0, ರಾಮನಗರ 0, ಶಿವಮೊಗ್ಗ 7, ತುಮಕೂರು 26, ಉಡುಪಿ 63, ಉತ್ತರ ಕನ್ನಡ 41, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ತಲಾ 4 ಮಂದಿ ಬಲಿಯಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ 3 ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಧಾರವಾಡ, ಕೋಲಾರ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ 1 ಮಂದಿ ಮೃತಪಟ್ಟಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ದಿನನಿತ್ಯ ಕಾಡುವ ಮೈಗ್ರೇನ್ ಸಮಸ್ಯೆ ಹೋಗಲಾಡಿಸಲು ಮೀನು ತಿಂದು ನೋಡಿ..