Select Your Language

Notifications

webdunia
webdunia
webdunia
Saturday, 12 April 2025
webdunia

ಕೊರೊನಾ ವಿರುದ್ಧ ಹೋರಾಡಲು ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡಿ- ಕೇಂದ್ರಕ್ಕೆ ಕಾಂಗ್ರೆಸ್ ಮನವಿ

ನವದೆಹಲಿ
ನವದೆಹಲಿ , ಶುಕ್ರವಾರ, 24 ಏಪ್ರಿಲ್ 2020 (09:20 IST)

ನವದೆಹಲಿ : ಕೊರೊನಾ ವಿರುದ್ಧ ಹೋರಾಡಲು ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡಿ ಎಂದು ಕಾಂಗ್ರೆಸ್, ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.

 

ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಭೆ ನಡೆಸಿದ್ದು, ಈ ವೇಳೆ ಮಾತನಾಡಿದ ಕಾಂಗ್ರೆಸ್ ವಕ್ತಾರ ಸಂದೀಪ್ ಸುರ್ಜೆವಾಲಾ, ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ರಾಜ್ಯಗಳನ್ನು ಸಬಲೀಕರಣಗೊಳಿಸಲು ಕೇಂದ್ರ ಸರ್ಕಾರವು ಸಾಕಷ್ಟು ಆರ್ಥಿಕ ನೆರವು ನೀಡಬೇಕು. ಜಿಎಸ್ ಟಿಯ ಸಂಪೂರ್ಣ ಮೊತ್ತವನ್ನು ರಾಜ್ಯಗಳಿಗೆ ಹಿಂದಿರುಗಿಸುವ ಮೂಲಕ ಮತ್ತು ಸಾಲ ತೆಗೆದುಕೊಳ್ಳಲು ಹೆಚ್ಚಿನ ಆರ್ಥಿಕ ಸ್ವಾತಂತ್ರ್ಯವನ್ನು ರಾಜ್ಯಗಳಿಗೆ ನೀಡುವ ಮೂಲಕ ಪ್ರಾರಂಭಿಸಬಹುದು ಎಂದು ಹೇಳಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ರೋಮ್ಯಾನ್ಸ್ ಮಾಡೋಣ ಎಂದರೆ ಬೆಚ್ಚಿಬೀಳುವ ಪತ್ನಿ