ಭಾರತದಲ್ಲಿ ಏರುತ್ತಿರುವ ಕೊರೋನಾ!

Webdunia
ಬುಧವಾರ, 1 ಸೆಪ್ಟಂಬರ್ 2021 (13:10 IST)
ನವದೆಹಲಿ: ಕೆಲ ದಿನಗಳಿಂದ ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ದೇಶದಲ್ಲಿ ಬುಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 41,965 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 460 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,28,10,845ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,39,020ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,78,181ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 33,964 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,19,93,644ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 16,06,785 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 52,31,84,293 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು.
ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 65,41,13,508 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಔಷಧಿಗಳನ್ನು ಎಕ್ಸಪೈರಿ ಡೇಟ್ ಆದ ಮೇಲೆ ತಗೊಂಡ್ರೆ ಜೀವಕ್ಕೇ ಕುತ್ತು video

ತಲೆಹೊಟ್ಟು ನಿವಾರಣೆಗೆ ಸರಳ ಮನೆಮದ್ದು ಇಲ್ಲಿದೆ

ಚಳಿಗಾಲದಲ್ಲಿ ಹಣ್ಣು ಸೇವನೆ ಮಾಡುವಾಗ ನೆನಪಿಡಬೇಕಾದ ವಿಚಾರಗಳು

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣಿನ ಜ್ಯೂಸ್ ಕುಡಿಯಿರಿ, ತಿಂಗಳಲ್ಲೇ ಮ್ಯಾಜಿಕ್ ನೋಡಿ

ವಾರಕ್ಕೆ ಎಷ್ಟು ಮದ್ಯ ಸೇವನೆ ಮಾಡಿದರೆ ಆರೋಗ್ಯ ಸುರಕ್ಷಿತ

ಮುಂದಿನ ಸುದ್ದಿ
Show comments