ಒಮಿಕ್ರಾನ್ ಭೀತಿ: ಡಿ.20 ರಿಂದ ದೇಶದ 6 ವಿಮಾನ ನಿಲ್ದಾಣದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆ ಕಡ್ಡಾಯ

Webdunia
ಬುಧವಾರ, 15 ಡಿಸೆಂಬರ್ 2021 (13:49 IST)
ಡಿಸೆಂಬರ್ 20 ರಿಂದ ಹೈ ರಿಸ್ಕ್ ದೇಶಗಳಿಂದ ಬರುವವರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ.
ಒಮಿಕ್ರಾನ್ ಸೋಂಕು ಹೆಚ್ಚಳವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದ್ದು, ವಿದೇಶಿ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ.
ದೇಶದ 6 ಮುಖ್ಯ ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆ ಕಡ್ಡಾಯವಾಗಿದೆ. ಒಮಿಕ್ರಾನ್ ಸೋಂಕು ಕಾಣಿಸಿದ ಹಲವರು ಟ್ರಾವೆಲ್ ಹಿಸ್ಟರಿ ಹೊಂದಿದ್ದಾರೆ. ಇದೇ ಕಾರಣಕ್ಕೆ ವಿಮಾನ ನಿಲ್ದಾಣದಲ್ಲಿಯೇ ಸೋಂಕು ಪತ್ತೆಹಚ್ಚಲಾಗುವುದು. ಬೆಂಗಳೂರು, ಕೊಲ್ಕತ್ತಾ, ಮುಂಬೈ, ದೆಹಲಿ, ಚೆನ್ನೈ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆ ಕಡ್ಡಾಯ ಮಾಡಲಾಗಿದೆ ಎಂದು ಕೇಂದ್ರ ವಿಮಾನಯಾನ ಸಚಿವಾಲಯ ತಿಳಿಸಿದೆ.
ಏರ್ ಸುವಿಧಾ ಪೋರ್ಟಲ್‌ನಲ್ಲಿ ವಿದೇಶಿ ಪ್ರವಾಸಿಗರು ನೋಂದಣಿ ಮಾಡಿಕೊಳ್ಳಬೇಕಿದೆ. ಅತಿ ಹೆಚ್ಚು ಸೋಂಕು ಇರುವ ದೇಶಗಳಿಂದ ಬರುವ ಪ್ರಯಾಣಿಕರಿಗೆ 14 ದಿನಗಳ ಕ್ವಾರೆಂಟೀನ್ ಕಡ್ಡಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ
Show comments