Publish Date: Fri, 17 Jul 2020 (10:32 IST)
Updated Date: Fri, 17 Jul 2020 (10:33 IST)
Normal
0
false
false
false
EN-US
X-NONE
X-NONE
ಬೆಂಗಳೂರು : ಕೊರೊನಾಗೆ ಹೆದರಿ ಕೊರೊನಾ ಸೋಂಕಿತೆ ಸುಸೈಡ್ ಮಾಡಿಕೊಂಡ ಘಟನೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.
ಬೆಂಗಳೂರಿನ ಶ್ರೀರಾಂಪುರದ 60 ವರ್ಷದ ಮಹಿಳೆ ಕೊರೊನಾ ಸೋಂಕಿಗೆ ಹೆದರಿ ಸೂಸೈಡ್ ಮಾಡಿಕೊಂಡಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿದ್ದ ಮಹಿಳೆಗೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇನ್ನೆರಡು ದಿನಗಳಲ್ಲಿ ವೈದ್ಯರು ಡಿಸ್ಚಾರ್ಜ್ ಮಾಡುವುದಾಗಿ ಹೇಳಿದ್ದರು. ಆದರೂ ಕೂಡ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.