Publish Date: Wed, 24 Jun 2020 (09:50 IST)
Updated Date: Wed, 24 Jun 2020 (09:51 IST)
ಇಸ್ಲಾಮಾಬಾದ್: ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲು ಸಿದ್ಧತೆ ನಡೆಸಿದ್ದ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಕೊರೋನಾ ಮಹಾಮಾರಿ ಬೆಚ್ಚಿಬೀಳಿಸಿದೆ. ಒಟ್ಟು 10 ಕ್ರಿಕೆಟಿಗರಿಗೆ ಕೊರೋನಾ ಇರುವುದು ದೃಢಪಟ್ಟಿದೆ.
ಇಂಗ್ಲೆಂಡ್ ಪ್ರವಾಸಕ್ಕೆ ತೆರಳುವ ಮುನ್ನ ಎಲ್ಲಾ ಕ್ರಿಕೆಟಿಗರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿತ್ತು. ಇವರಲ್ಲಿ 10 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಶಾದಾಬ್ ಖಾನ್, ಫಕಾರ್ ಜಮಾನ್, ಹೈದರ್ ಅಲಿ, ಹ್ಯಾರಿಸ್ ರೌಫ್, ಇಮ್ರಾನ್ ಖಾನ್, ಕಾಶಿಫ್ ಭಾಟ್ಟಿ, ಮೊಹಮ್ಮದ್ ಹಫೀಜ್, ಮೊಹಮ್ಮದ್ ಹಸ್ತೈನ್, ಮೊಹಮ್ಮದ್ ರಿಜ್ವಾನ್, ವಹಾಬ್ ರಿಯಾಜ್ ಸೋಂಕಿತ ಆಟಗಾರರು.