Daily Horoscope

Select Your Language

Notifications

webdunia
webdunia
webdunia
webdunia

3rd T20: ಏಕದಿನ ಸರಣಿಯ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ

India Cricket, New Zealand Cricket, Captain Suryakumar Yadav
Photo Credit X
ಗುವಾಹಟಿ: ನ್ಯೂಜಿಲೆಂಡ್‌ ತಂಡವು ಭಾರತದ ನೆಲದಲ್ಲಿ ಮೂರು ದಶಕಗಳ ಬಳಿಕ ಏಕದಿನ ಸರಣಿ ಗೆದ್ದು, ಚಾರಿತ್ರಿಕ ಸಾಧನೆ ಮೆರೆದಿತ್ತು. ಆ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುವ ತವಕದಲ್ಲಿರುವ ಟೀಂ ಇಂಡಿಯಾ ಟಿ20 ಸರಣಿಯನ್ನು ವಶಮಾಡಿಕೊಳ್ಳುವ ತವಕದಲ್ಲಿದೆ.

ಮೂರು ಪಂದ್ಯಗಳ ಏಕದಿನ ಸರಣಿಯನ್ನು ನ್ಯೂಜಿಲೆಂಡ್‌ ತಂಡ 2–1ರಿಂದ ಗೆದ್ದುಕೊಂಡಿತ್ತು. ಇದೀಗ ಐದು ಪಂದ್ಯಗಳ ಟಿ20 ಸರಣಿಯ 3ನೇ ಪಂದ್ಯವು ಇಂದು ನಡೆಯಲಿದೆ. ಭಾರತ ತಂಡವು ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದಿದೆ.

ಗುವಾಹಟಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ ಎನ್ನಲಾಗಿದೆ. ಏಕೆಂದರೆ ಕಳೆದ ಮ್ಯಾಚ್​ ವೇಳೆ ವಿಶ್ರಾಂತಿ ಪಡೆದಿದ್ದ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಈ ಪಂದ್ಯವು ಸರಣಿ ನಿರ್ಣಾಯಕವಾಗಿರುವುದರಿಂದ ಬೂಮ್ರಾ ಅವರು ಹರ್ಷಿತ್ ರಾಣಾ ಅಥವಾ ಅರ್ಷದೀಪ್ ಸಿಂಗ್ ಸ್ಥಾನದಲ್ಲಿ ಕಣಕ್ಕಿಳಿಯಬಹುದು.

ಈ ಪಂದ್ಯವು ಸರಣಿಗೆ ನಿರ್ಣಾಯಕ. ಏಕೆಂದರೆ ಐದು ಪಂದ್ಯಗಳ ಮೊದಲೆರಡು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ತಂಡವು ಗೆದ್ದರೆ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಅತ್ತ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ನ್ಯೂಜಿಲೆಂಡ್ ತಂಡವು ಇಂದಿನ ಮ್ಯಾಚ್​ನಲ್ಲಿ ಗೆಲ್ಲಲೇಬೇಕು. ಆ ತಂಡಕ್ಕೆ ಇದು ಮಾಡು ಇಲ್ಲವೆ ಮಡಿ ಪಂದ್ಯ.

 

Share this Story:

Follow Webdunia kannada

ಮುಂದಿನ ಸುದ್ದಿ

WPL 2026: ಆರ್‌ಸಿಬಿ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌ ಹಾಕಿದ ಡೆಲ್ಲಿ ಕ್ಯಾಪಿಟಲ್ಸ್‌