ಪಲೆಕೆಲೆ: ಬೌಲರ್‌ಗಳ ಪರಿಣಾಮಕಾರಿ ದಾಳಿಯ ಬಳಿಕ ಯಶಸ್ವಿ ಜೈಸ್ವಾಲ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಅಬ್ಬರದ ಬ್ಯಾಟಿಂಗ್ ಬಲದಿಂದ ಭಾರತ ತಂಡವು ಭಾನುವಾರ ಎರಡನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಡಕ್ವರ್ಥ್ ಲೂಯಿಸ್ ನಿಯಮದಡಿ ಏಳು ವಿಕೆಟ್‌ಗಳಿಂದ ಸೋಲಿಸಿತು.
ಮೂರು ಪಂದ್ಯಗಳ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆ ಭಾರತ ತಂಡವು 2-0ಯಿಂದ ಕೈವಶ ಮಾಡಿಕೊಂಡಿತು. ಮೊದಲ ಪಂದ್ಯದಲ್ಲೂ ಭಾರತ ಜಯ ಗಳಿಸಿತ್ತು. ಕೊನೆಯ ಪಂದ್ಯವು ನಾಳೆ ನಡೆಯಲಿದೆ.
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ತಂಡವು ಕುಶಾಲ ಪೆರೆರಾ (53; 34ಎ) ಅವರ ಅರ್ಧಶತಕದ ಬಲದಿಂದ 20 ಓವರ್‌ಗ ಳಲ್ಲಿ 9 ವಿಕೆಟ್‌ಗಳಿಗೆ 161 ರನ್ ಗಳಿಸಿತು. ಭಾರತ ಬ್ಯಾಟಿಂಗ್ ಆರಂಭಿಸುತ್ತಿದ್ದಂತೆ ಪಂದ್ಯಕ್ಕೆ ಮಳೆ ಅಡ್ಡಿಯಾಯಿತು. ಹೀಗಾಗಿ, ಗುರಿಯನ್ನು ಪರಿಷ್ಕರಿಸಲಾಯಿತು.
ಭಾರತದ ಗೆಲುವಿಗೆ 8 ಓವರ್‌ಗಳಲ್ಲಿ 78 ರನ್ ಗಳಿಸಬೇಕಿತ್ತು. ಆದರೆ, ಭಾರತವು 6.3 ಓವರ್‌ಗಳಲ್ಲಿ ಮೂರು ವಿಕೆಟ್‌ಗೆ 81 ರನ್ ಗಳಿಸಿ ಗೆಲುವಿನ ಗಡಿ ದಾಟಿತು. ಜೈಸ್ವಾಲ್ (30 ರನ್), ಸೂರ್ಯಕುಮಾರ್ (26 ರನ್) ಮತ್ತು ಹಾರ್ದಿಕ್ ಪಾಂಡ್ಯ (ಔಟಾಗದೇ 22) ಸ್ಪೋಟಕ ಬ್ಯಾಟಿಂಗ್ ನಡೆಸಿ, ಗೆಲುವಿನ ರೂವಾರಿಗಳಾದರು.