Publish Date: Tue, 11 Sep 2018 (09:35 IST)
Updated Date: Tue, 11 Sep 2018 (09:37 IST)
ಸಿಡ್ನಿ: ಇಂಗ್ಲೆಂಡ್ ನಲ್ಲಿ ಟೀಂ ಇಂಡಿಯಾ ಹೇಳಿಕೊಳ್ಳುವಂತಹ ಸಾಧನೆ ಮಾಡದೇ ಇರಬಹುದು. ಆದರೆ ವಿರಾಟ್ ಕೊಹ್ಲಿಯನ್ನು ಕೆಣಕುವ ದುಸ್ಸಾಹಸ ಮಾಡಬೇಡಿ ಎಂದು ಮಾಜಿ ಕ್ರಿಕೆಟಿಗ ಆಡಂ ಗಿಲ್ ಕ್ರಿಸ್ಟ್ ತಮ್ಮ ದೇಶದ ಕ್ರಿಕೆಟಿಗರಿಗೆ ಎಚ್ಚರಿಕೆ ನೀಡಿದ್ದಾರೆ.
‘ವಿರಾಟ್ ಕೊಹ್ಲಿ ಬಳಗದಲ್ಲಿ ವಿದೇಶಗಳಲ್ಲಿ ಉತ್ತಮ ನಿರ್ವಹಣೆ ತೋರಬಲ್ಲ ಬೌಲರ್ ಗಳು, ಬ್ಯಾಟ್ಸ್ ಮನ್ ಗಳಿದ್ದಾರೆ. ವಿಶೇಷವಾಗಿ ಸ್ವತಃ ಕೊಹ್ಲಿ ವಿಶ್ವ ಶ್ರೇಷ್ಠ ಕ್ರಿಕೆಟಿಗ. ಹೀಗಾಗಿ ಅವರನ್ನು ಕಡೆಗಣಿಸಲಾಗದು’ ಎಂದು ಗಿಲ್ ಕ್ರಿಸ್ಟ್ ಅಭಿಪ್ರಾಯಪಟ್ಟಿದ್ದಾರೆ.
ಈ ವರ್ಷದಂತ್ಯಕ್ಕೆ ಭಾರತ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಇಂಗ್ಲೆಂಡ್ ಸರಣಿ ಬಳಿಕ ಟೀಂ ಇಂಡಿಯಾ ಆಡಲಿರುವ ಮಹತ್ವದ ವಿದೇಶೀ ಸರಣಿ ಇದಾಗಿದೆ. ಇದು ಕೊಹ್ಲಿಗೆ ಮತ್ತೊಂದು ಅಗ್ನಿಪರೀಕ್ಷೆಯಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.