Webdunia - Bharat's app for daily news and videos

Install App

ಚಾಂಪಿಯನ್ಸ್‌ ಟ್ರೋಫಿಯ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಅಫ್ಗನ್‌

Sampriya
ಬುಧವಾರ, 26 ಫೆಬ್ರವರಿ 2025 (14:16 IST)
Photo Courtesy X
ಲಾಹೋರ್‌: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಇಂದು ಮಾಜಿ ಚಾಂಪಿಯನ್‌ ಇಂಗ್ಲೆಂಡ್‌ ತಂಡವು ಕ್ರಿಕೆಟ್‌ ಶಿಶು ಅಫ್ಗಾನಿಸ್ಥಾನ ತಂಡದೊಂದಿಗೆ ಸೆಣಸಲಿದೆ.

ಟೂರ್ನಿಯ ಬಿ ಗುಂಪಿನ ಈ ಪಂದ್ಯವು ಉಭಯ ತಂಡಗಳಿಗೆ ನಿರ್ಣಾಯಕವಾಗಿದೆ. ಈ ಪಂದ್ಯದಲ್ಲಿ ಸೋತ ತಂಡವು ಟೂರ್ನಿಯಿಂದಲೇ ಹೊರಬೀಳಲಿದೆ. ಗೆದ್ದ ತಂಡಕ್ಕೆ ಸೆಮಿಫೈನಲ್‌ ಕನಸು ಜೀವಂತವಾಗಿ ಉಳಿಯಲಿದೆ.

ಇಂಗ್ಲೆಂಡ್‌ ತಂಡವು ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಪರಾಭವಗೊಂಡಿದೆ. ರನ್‌ ಹೊಳೆ ಹರಿದ ಆ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಜಯಭೇರಿ ಬಾರಿಸಿದೆ.

ಚಾಂಪಿಯನ್ಸ್‌ ಟ್ರೋಫಿಗೆ ಪದಾರ್ಪಣೆ ಮಾಡಿರುವ ಅಫ್ಗನ್‌ ತಂಡವು ಈಗಾಗಲೇ ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಅನುಭವಿಸಿದೆ. ಐಸಿಸಿ ಏಕದಿನ ವಿಶ್ವಕಪ್‌ ಮತ್ತು ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗಳಲ್ಲಿ ಘಟಾನುಘಟಿ ತಂಡಗಳಿಗೆ ಆಘಾತ ನೀಡಿದ್ದ ಅಫ್ಗನ್‌ ತಂಡ ಮತ್ತೆ ಮೋಡಿ ಮಾಡುವ ತವಕದಲ್ಲಿದೆ.

ಭಾರತ ತಂಡವು ಬಾಂಗ್ಲಾದೇಶ ಮತ್ತು ಪಾಕಿಸ್ತಾನ ತಂಡಗಳನ್ನು ಮಣಿಸಿ ಈಗಾಗಲೇ ಸೆಮಿಫೈನಲ್‌ಗೆ ಮುನ್ನಡೆದಿದೆ. ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಭಾನುವಾರ ನ್ಯೂಜಿಲೆಂಡ್‌ ತಂಡವನ್ನು ಎದುರಿಸಲಿದೆ. ನ್ಯೂಜಿಲೆಂಡ್ ತಂಡವೂ ಸೆಮಿಫೈನಲ್‌ಗೆ ಅರ್ಹತೆ ಪಡೆದಿರುವುದರಿಂದ ಈ ಪಂದ್ಯ ಔ‍ಪಚಾರಿಕವಾಗಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments