ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಜೆಮಿಮಾ ರೊಡ್ರಿಗಸ್ ಈಗ ಮತಾಂತರದ ಆರೋಪಕ್ಕೊಳಗಾಗಿದ್ದು ಅವರನ್ನು ತಂಡದಿಂದ ವಜಾಗೊಳಿಸಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.
ನಿನ್ನೆಯಷ್ಟೇ ಅವರ ತಂದೆ ಇವಾನ್ ರೊಡ್ರಿಗಸ್ ಜಿಮ್ಖಾನಾ ಕ್ರಿಕೆಟ್ ಕ್ಲಬ್ ನಲ್ಲಿ ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರು ಎಂಬ ಆರೋಪದಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಕ್ರಿಕೆಟ್ ಕ್ಲಬ್ ನಿಂದ ಜೆಮಿಮಾ ಸದಸ್ಯತ್ವವನ್ನು ರದ್ದುಪಡಿಸಲಾಗಿತ್ತು.
ಇದೀಗ ಸ್ವತಃ ಜೆಮಿಮಾ ಕೂಡಾ ಈ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದರು ಎಂಬ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಲಾಗಿದೆ. ಈ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು ತಕ್ಷಣವೇ ಜೆಮಿಮಾರನ್ನು ತಂಡದಿಂದ ಕಿತ್ತು ಹಾಕಬೇಕು ಎಂದು ಆಗ್ರಹ ಕೇಳಿಬಂದಿದೆ.
ಬಿಸಿಸಿಐ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡ ಇದಕ್ಕೆ ಪ್ರತಿಕ್ರಿಯೆ ನೀಡಲೇಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ. ಅವರ ತಂದೆಯ ಮತಾಂತರ ಕಾರ್ಯಕ್ರಮವೊಂದರಲ್ಲಿ ಜೆಮಿಮಾ ಕೂಡಾ ಭಾಗಿಯಾಗಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಅವರ ತಂದೆ ನಡೆಸಿಕೊಡುತ್ತಿರುವ ಮತಾಂತರ ಕಾರ್ಯಕ್ರಮದಲ್ಲೇ ಜೆಮಿಮಾ ಕೂಡಾ ಭಾಗಿಯಾಗಿದ್ದಾರೆ. ಅವರು ಕೂಡಾ ಕ್ರಿಶ್ಚಿಯನ್ ಧರ್ಮದ ಬಗ್ಗೆ ಮಾತನಾಡುವ ವಿಡಿಯೋಗಳಿವೆ. ಇದನ್ನು ನೋಡಿದ ಮೇಲೆ ನೆಟ್ಟಿಗರು ಈಕೆಯನ್ನು ತಕ್ಷಣವೇ ಭಾರತ ತಂಡದಿಂದ ಹೊರಗಿಡಬೇಕು ಎಂದು ಆಗ್ರಹಿಸಿದ್ದಾರೆ.