Webdunia - Bharat's app for daily news and videos

Install App

ಮೂರೂವರೆ ದಶಕಗಳ ಬಳಿಕ ಭಾರತದಲ್ಲಿ ಟೆಸ್ಟ್‌ ಪಂದ್ಯ ಗೆದ್ದ ಕಿವೀಸ್‌ ಪಡೆ

Sampriya
ಭಾನುವಾರ, 20 ಅಕ್ಟೋಬರ್ 2024 (13:04 IST)
Photo Courtesy X
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ತಂಡವು ಎಂಟು ವಿಕೆಟ್‌ಗಳಿಂದ ಭಾರತವನ್ನು ಮಣಿಸಿ ವಿಶೇಷ ದಾಖಲೆ ಬರೆಯಿತು.  36 ವರ್ಷಗಳ ಬಳಿಕ ಭಾರತದ ನೆಲದಲ್ಲಿ ಟೆಸ್ಟ್‌ ಪಂದ್ಯ ಗೆದ್ದ ಸಾಧನೆ ಮಾಡಿತು.

ಪಂದ್ಯದ ಕೊನೆಯ ದಿನವಾದ ಭಾನುವಾರ ಭಾರತ ನೀಡಿದ 107 ರನ್‌ಗಳ ಸುಲಭ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ತಂಡ ಇನ್ನೂ 8 ವಿಕೆಟ್‌ ಬಾಕಿ ಇರುವಂತೆಯೇ ಗೆಲುವು ಸಾಧಿಸಿತು.  ಎರಡನೇ ಇನಿಂಗ್ಸ್‌ನಲ್ಲೂ ರಚಿನ್‌ ರವೀಂದ್ರ (ಅಜೇಯ 39) ಹಾಗೂ ವಿಲ್‌ ಯಂಗ್‌ (ಅಜೇಯ 48) ಅವರು ಕಿವೀಸ್‌ ತಂಡಕ್ಕೆ ಆಸರೆಯಾದರು.  ಮೂರು ಪಂದ್ಯಗಳ ಸರಣಿಯಲ್ಲಿ ನ್ಯೂಜಿಲೆಂಡ್‌ ತಂಡವು 1-0 ಮುನ್ನಡೆ ಪಡೆಯಿತು.

ಖಾತೆ ತೆರೆಯದಿದ್ದರೂ ವಿಕೆಟ್‌ ಕೊಡದೆ ನಾಲ್ಕನೇ ದಿನದಾಟ ಮುಗಿಸಿದ್ದ ಪ್ರವಾಸಿ ಪಡೆಗೆ, ವೇಗಿ ಜಸ್‌ಪ್ರಿತ್‌ ಬೂಮ್ರಾ 5ನೇ ದಿನದ ಆರಂಭದಲ್ಲೇ ಆಘಾತ ನೀಡಿದರು. 4 ಎಸೆತಗಳನ್ನು ಎದುರಿಸಿ ಕ್ರೀಸ್‌ ಕಾಯ್ದುಕೊಂಡಿದ್ದ ನಾಯಕ ಟಾಮ್‌ ಲಥಾಮ್‌ ದಿನದ 2ನೇ ಎಸೆತದಲ್ಲೇ ಎಲ್‌ಬಿ ಬಲೆಗೆ ಬಿದ್ದರು.

ಇದರೊಂದಿಗೆ ಭಾರತ ಪಾಳಯದಲ್ಲಿ ನಿರೀಕ್ಷೆಗಳು ಗರಿಗೆದರಿದ್ದವು. ತಂಡದ ಮೊತ್ತ 35 ರನ್‌ ಆಗಿದ್ದಾಗ ಡೆವೋನ್‌ ಕಾನ್ವೇ (17 ರನ್‌) ಅವರನ್ನೂ ಪೆವಿಲಿಯನ್‌ಗೆ ಅಟ್ಟಿದ ಬೂಮ್ರಾ, ಆ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದರು. ಆದರೆ, ರವೀಂದ್ರ ಮತ್ತು ಯಂಗ್‌ ಅದಕ್ಕೆ ಅವಕಾಶ ನೀಡಲಿಲ್ಲ. ಇವರಿಬ್ಬರು ಮುರಿಯದ 3ನೇ ವಿಕೆಟ್‌ ಜೊತೆಯಾಟದಲ್ಲಿ 72 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಎರಡನೇ ಟೆಸ್ಟ್‌ ಪಂದ್ಯವು ಪುಣೆಯಲ್ಲಿ ಇದೆ 24ರಿಂದ 28ರವರೆಗೆ ಮತ್ತು ಕೊನೆಯ ಪಂದ್ಯ ನ.1ರಿಂದ 5ರವರೆಗೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG:ಟೀಂ ಇಂಡಿಯಾ ಕ್ಯಾಪ್ಟನ್ ಶುಭಮನ್ ಗಿಲ್ ಟಾಸ್ ಸೋಲುವುದರಲ್ಲೇ ದಾಖಲೆ

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

ಮುಂದಿನ ಸುದ್ದಿ
Show comments