Webdunia - Bharat's app for daily news and videos

Install App

ಭಾರತದಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡದ ಅವಸ್ಥೆ ನೋಡಿ ಆಸ್ಟ್ರೇಲಿಯಾಕ್ಕೆ ನಡುಕ ಶುರುವಾಗಿದೆಯಂತೆ!

Webdunia
ಶನಿವಾರ, 21 ಜನವರಿ 2017 (09:37 IST)
ಸಿಡ್ನಿ:  ಇಂಗ್ಲೆಂಡ್ ತಂಡ ಭಾರತದಲ್ಲಿ ಸೋಲುತ್ತಿರುವ ಪರಿ ಕಂಡು ಮುಂದಿನ ತಿಂಗಳು ಭಾರತ ಪ್ರವಾಸ ಕೈಗೊಳ್ಳಲಿರುವ ಆಸ್ಟ್ರೇಲಿಯಾ ತಂಡಕ್ಕೆ ನಡುಕ ಶುರುವಾಗಿದೆಯಂತೆ. ಅದಕ್ಕಾಗಿ ಈಗಾಗಲೇ ಕೆಲವು ಮುನ್ನಚ್ಚರಿಕೆ ಕ್ರಮಗಳನ್ನೂ ಕೈಗೊಂಡಿದೆ.
 

ಭಾರತಕ್ಕೆ ಬಂದಾಗಿನಿಂದ ಒಂದು ಅಭ್ಯಾಸ ಪಂದ್ಯದಲ್ಲಿ ಜಯಗಳಿಸಿದ್ದು ಬಿಟ್ಟರೆ ಇಂಗ್ಲೆಂಡ್ ಟೆಸ್ಟ್ ಅಥವಾ ಏಕದಿನದಲ್ಲಿ ಒಂದೇ ಒಂದು ಗೆಲುವು ಕಂಡಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಸೋಲಿನ ರೀತಿ ಹೀನಾಯವಾಗಿತ್ತು. ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಕ್ರಿಕೆಟ್ ಆಸ್ಟ್ರೇಲಿಯಾ ಮುಂದಿನ ತಿಂಗಳು ಪ್ರವಾಸ ಕೈಗೊಳ್ಳಲಿರುವ ತನ್ನ ತಂಡಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ.

ಯಾವುದೇ ಕಾರಣಕ್ಕೂ ಟಿವಿ ನೋಡಬೇಡಿ. ಇಂಗ್ಲೆಂಡ್ ಮತ್ತು ಭಾರತದ ಮೊದಲೆರಡು ಏಕದಿನ ಪಂದ್ಯಗಳ ವಿಡಿಯೋ ನೋಡಿದರೆ ಆಟಗಾರರ ಮನೋಸ್ಥೈರ್ಯ ಕುಗ್ಗುವುದು ಖಂಡಿತಾ. ಹಾಗಾಗಿ ಟಿವಿ ಆನ್ ಮಾಡಲೇ ಬೇಡಿ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಪ್ರಸಕ್ತ ಸರಣಿ ಆಸೀಸ್ ನ ಸ್ಟೀವ್ ಸ್ಮಿತ್ ಬಳಗಕ್ಕೆ ಎಚ್ಚರಿಕೆಯ ಕರೆಗಂಟೆ ಇದ್ದಂತೆ ಎಂದು ಕ್ರಿಕೆಟ್ ಮಂಡಳಿ ಎಚ್ಚರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments