Select Your Language

Notifications

webdunia
webdunia
webdunia
webdunia

ರೋಹಿತ್ ಶರ್ಮಾ, ವಿರಾಟ್‌ ಕೊಹ್ಲಿ ನಿವೃತ್ತಿ ವದಂತಿ ಬೆನ್ನಲ್ಲೇ ತಂಡದ ಆಟಗಾರನಿಂದ ಸ್ಪೋಟಕ ಮಾಹಿತಿ

ICC Champions Trophy Cricket

Sampriya

ದುಬೈ , ಭಾನುವಾರ, 9 ಮಾರ್ಚ್ 2025 (09:57 IST)
Photo Courtesy X
ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಫೈನಲ್‌ ಇಂದು ದುಬೈನಲ್ಲಿ ನಡೆಯಲಿದೆ. ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳು ಇಂದು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.

ಫೈನಲ್ ಪಂದ್ಯದ ಬಳಿಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಸ್ಟಾರ್‌ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ಏಕದಿನ ಕ್ರಿಕೆಟ್‌ ವಿದಾಯ ಘೋಷಿಸಲಿದ್ದಾರೆ ಎಂಬ ಕುರಿತು ವದಂತಿಗಳು ಹರಡಿದ್ದವು.

36 ವರ್ಷದ ಕೊಹ್ಲಿ ಮತ್ತು 37 ವರ್ಷದ ರೋಹಿತ್‌ ಶರ್ಮಾ ಅವರಿಗೆ ಇದು ನಿರ್ಣಾಯಕ ಪಂದ್ಯವಾಗಿದೆ. ಲಯ ಕಂಡುಕೊಳ್ಳಲು ಪರದಾಡುತ್ತಿರುವ ರೋಹಿತ್‌ ಅವರಿಗೆ ಇದು ನಿರ್ಣಾಯಕ ಪಂದ್ಯ ಎನ್ನಲಾಗುತ್ತಿದೆ.

ಆದರೆ, ವದಂತಿಯ ಕುರಿತು ತಂಡ ಉಪನಾಯಕ ಮತ್ತು ಆರಂಭಿಕ ಬ್ಯಾಟರ್‌ ಪ್ರತಿಕ್ರಿಯೆ ನೀಡಿದ್ದು,  ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರ ಭವಿಷ್ಯದ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ತಂಡದ ಡ್ರೆಸ್ಸಿಂಗ್ ಕೊಠಡಿಯಲ್ಲಿ ರೋಹಿತ್ ಹಾಗೂ ವಿರಾಟ್ ನಿವೃತ್ತಿ ಚರ್ಚೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೂ ಇಂದಿನ ಹೈವೋಲ್ಟೇಜ್‌ ಪಂದ್ಯ ಎಲ್ಲರ ಗಮನ ಸೆಳೆದಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ವಾರಿಯರ್ಸ್‌ ವಿರುದ್ಧ ಹೋರಾಡಿ ಸೋತ ಆರ್‌ಸಿಬಿ: ನಾಕೌಟ್‌ ರೇಸ್‌ನಿಂದ ಹೊರಬಿದ್ದ ಮಂದಾನ ಪಡೆ