ಅನುಷ್ಕಾ ಶರ್ಮಾ ಪ್ರೆಗ್ನೆನ್ಸಿ ಬಗ್ಗೆ ಹೊಸದೊಂದು ರೂಮರ್

Krishnaveni K
ಮಂಗಳವಾರ, 13 ಫೆಬ್ರವರಿ 2024 (08:59 IST)
ಮುಂಬೈ: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಬಗ್ಗೆ ಈಗ ಹೊಸದೊಂದು ರೂಮರ್ ಹರಿದಾಡುತ್ತಿದೆ.

ಸ್ಟಾರ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಆದರೆ ಇದುವರೆಗೆ ಕೊಹ್ಲಿ ಕಡೆಯಿಂದ ಅಧಿಕೃತ ಹೇಳಿಕೆ ಬಂದಿಲ್ಲ. ಆದರೆ ಇತ್ತೀಚೆಗೆ ಕೊಹ್ಲಿ ಸ್ನೇಹಿತ, ಕ್ರಿಕೆಟಿಗ ಎಬಿಡಿ ವಿಲಿಯರ್ಸ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದಿದ್ದರು. ಬಳಿಕ ತಮ್ಮ ಹೇಳಿಕೆ ವೈರಲ್ ಆಗುತ್ತಿದ್ದಂತೇ ನಾನು ಸುಳ್ಳು ಹೇಳಿದೆ ಎಂದು ಉಲ್ಟಾ ಹೊಡೆದಿದ್ದರು.

ಅನುಷ್ಕಾ ಪ್ರೆಗ್ನೆನ್ಸಿಯಲ್ಲಿ ಸಮಸ್ಯೆ?
ಇದೀಗ ಅನುಷ್ಕಾ ಪ್ರೆಗ್ನೆನ್ಸಿಯಲ್ಲಿ ಸಮಸ್ಯೆಯಿದೆ ಎಂದು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇದೇ ಕಾರಣಕ್ಕೆ ದಂಪತಿ ಮಗುವಿನ ಜನನದವರೆಗೂ ವಿದೇಶದಲ್ಲಿರಲಿದ್ದಾರೆ. ಹೀಗಾಗಿಯೇ ಕೊಹ್ಲಿ ಪದೇ ಪದೇ ಕ್ರಿಕೆಟ್ ನಿಂದ ಬ್ರೇಕ್ ಪಡೆಯುತ್ತಿದ್ದಾರೆ ಮತ್ತು ಪ್ರೆಗ್ನೆನ್ಸಿ ವಿಚಾರವನ್ನು ಎಲ್ಲರಿಂದ ಮುಚ್ಚಿಡುತ್ತಿದ್ದಾರೆ ಎಂದು ಸುದ್ದಿಯಾಗುತ್ತಿದೆ.

ಅಭಿಷೇಕ್ ತ್ರಿಪಾಠಿ ಎಂಬವರು ಅನುಷ್ಕಾಗೆ ಪ್ರೆಗ್ನೆನ್ಸಿಯಲ್ಲಿ ಸಮಸ್ಯೆಯಿದೆ. ಇದೇ ಕಾರಣಕ್ಕೆ ಕೊಹ್ಲಿ ಕುಟುಂಬದ ಜೊತೆಗಿರಲು ಬಯಸುತ್ತಿದ್ದಾರೆ ಮತ್ತು ಪದೇ ಪದೇ ವೈದ್ಯರನ್ನು ಕಾಣಲು ವಿದೇಶಕ್ಕೆ ತೆರಳುತ್ತಿದ್ದಾರೆ ಎಂದಿದ್ದಾರೆ. ಆದರೆ ಈ ಸುದ್ದಿ ಎಷ್ಟರಮಟ್ಟಿಗೆ ಅಧಿಕೃತ ಎಂದು ಗೊತ್ತಿಲ್ಲ. ಆದರೆ ಅಭಿಷೇಕ್ ಅವರ ಈ ಟ್ವೀಟ್ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವುದಂತೂ ಸತ್ಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments