Select Your Language

Notifications

webdunia
webdunia
webdunia
webdunia

ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಮತ್ತೊಬ್ಬ ಸ್ಟಾರ್‌ ಆಟಗಾರ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ

ICC Champions Trophy

Sampriya

ದುಬೈ , ಶನಿವಾರ, 11 ಜನವರಿ 2025 (15:49 IST)
Photo Courtesy X
ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮುಂದಿನ ತಿಂಗಳು 19 ರಿಂದ ಆರಂಭವಾಗುವ ಈ ಟೂರ್ನಿಗೂ ಮುನ್ನವೇ ಬಾಂಗ್ಲಾದೇಶ ತಂಡದ ಸ್ಟಾರ್ ಆಟಗಾರ ತಮೀಮ್ ಇಕ್ಬಾಲ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಬಾಂಗ್ಲಾದೇಶ್ ಪರ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿರುವ ದಾಖಲೆ ಹೊಂದಿರುವ ತಮೀಮ್ ಇದೀಗ ಏಕದಿನ ಟೂರ್ನಿ ಆರಂಭಕ್ಕೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಆಯ್ಕೆ ಸಮಿತಿಯು ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವಂತೆ ತಮೀಮ್‌ ಅವರ ಮನವೊಲಿಸಲು ಮುಂದಾಗಿತ್ತು. ಆದರೆ ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಆ ಬಳಿಕ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹುಸೇನ್ ಶಾಂತೊ ಕೂಡ ಹಿರಿಯ ಆಟಗಾರನಿಗೆ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ವಿನಂತಿಸಿದ್ದರು.

ಈ ಎಲ್ಲಾ ಮನವಿಯನ್ನು ತಿರಸ್ಕರಿಸಿರುವ ತಮೀಮ್, ಶುಕ್ರವಾರ ಸೋಷಿಯಲ್ ಮೀಡಿಯಾ ಮೂಲಕ ತಮ್ಮ ನಿವೃತ್ತಿಯನ್ನು ಘೋಷಿಸಿದ್ದಾರೆ. ಇದರೊಂದಿಗೆ 35 ವರ್ಷದ ತಮೀಮ್ ಇಕ್ಬಾಲ್ ಅವರ 16 ವರ್ಷಗಳ ಕ್ರಿಕೆಟ್ ಕೆರಿಯರ್ ಅಂತ್ಯಗೊಂಡಂತಾಗಿದೆ. ಅದರಲ್ಲೂ ಚಾಂಪಿಯನ್ಸ್ ಟ್ರೋಫಿಯ ಮೂಲಕ ವಿದಾಯ ಹೇಳುವ ಅವಕಾಶ ಹೊಂದಿದ್ದರೂ, ತಮೀಮ್ ಇಕ್ಬಾಲ್ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬಾಂಗ್ಲಾದೇಶ್ ಪರ 70 ಟೆಸ್ಟ್ ಪಂದ್ಯಗಳನ್ನಾಡಿರುವ ತಮೀಮ್ ಇಕ್ಬಾಲ್ 134 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 1 ದ್ವಿಶತಕ, 10 ಶತಕ ಹಾಗೂ 31 ಅರ್ಧಶತಕಗಳೊಂದಿಗೆ ಒಟ್ಟು 5134 ರನ್ ಕಲೆಹಾಕಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ 243 ಪಂದ್ಯಗಳಲ್ಲಿ 240 ಇನಿಂಗ್ಸ್ ಆಡಿರುವ ತಮೀಮ್ 14 ಶತಕ ಹಾಗೂ 56 ಅರ್ಧಶತಕಗಳೊಂದಿಗೆ 8357 ರನ್ ಬಾರಿಸಿದ್ದಾರೆ. ಈ ಮೂಲಕ ಬಾಂಗ್ಲಾ ಪರ ಒನ್​ಡೇ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಣ್ಣದ ಛತ್ರಿ, ಟೋಪಿ.. ಅಬ್ಬಾ ಮಕ್ಕಳು ಕ್ಯಾಮರಾಗೆ ಕಾಣದಂತೆ ಕೊಹ್ಲಿ ದಂಪತಿ ಇಷ್ಟೆಲ್ಲಾ ಕಷ್ಟಪಡಬೇಕಾ