Daily Horoscope

ಭಾರತ ಕಳಪೆ ತಂಡ ಮೈಕಲ್ ವಾನ್ ಗೆ ತಕ್ಕ ತಿರುಗೇಟು ಕೊಟ್ಟ ಅಶ್ವಿನ್

Krishnaveni K
ಭಾನುವಾರ, 7 ಜನವರಿ 2024 (12:23 IST)
ಮುಂಬೈ: ಭಾರತವನ್ನು ಕಳಪೆ ತಂಡ ಎಂದಿದ್ದ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ಗೆ ಟೀಂ ಇಂಡಿಯಾ ಸ್ಪಿನ್ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ತಿರುಗೇಟು ನೀಡಿದ್ದಾರೆ.

ಇತ್ತೀಚೆಗೆ ದ.ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಭಾರತ ಹೀನಾಯವಾಗಿ ಸೋತ ಬಳಿಕ ಮೈಕಲ್ ವಾನ್  ಭಾರತ ಕಳಪೆ ತಂಡ. ಎಲ್ಲಾ ಇದ್ದೂ ಪ್ರಮುಖ ಟೂರ್ನಿಗಳಲ್ಲಿ ಸೋಲುತ್ತಲೇ ಬಂದಿದೆ. ಕೆಲವು ವರ್ಷಗಳಿಂದ ಐಸಿಸಿ ಟೂರ್ನಿಯನ್ನೇ ಗೆದ್ದಿಲ್ಲ ಎಂದು ವ್ಯಂಗ್ಯ ಮಾಡಿದ್ದರು.

ಇದಕ್ಕೆ ಈಗ ಯೂ ಟ್ಯೂಬ್ ಸಂದರ್ಶನವೊಂದರಲ್ಲಿ ಅಶ್ವಿನ್ ತಿರುಗೇಟು ನೀಡಿದ್ದಾರೆ. ಭಾರತ ಐಸಿಸಿ ಟೂರ್ನಿಗಳನ್ನು ಗೆಲ್ಲದೆ ಕೆಲವು ವರ್ಷವಾಗಿರಬಹುದು. ಆದರೆ ಹಾಗಂತ ನಾವು ಕಳಪೆ ತಂಡವಲ್ಲ ಎಂದಿದ್ದಾರೆ.

‘ಕಳೆದ ಕೆಲವು ವರ್ಷಗಳಿಂದ ನಾವು ಐಸಿಸಿ ಟೂರ್ನಿ ಗೆಲ್ಲದೇ ಇರಬಹುದು. ಆದರೆ ಟೆಸ್ಟ್ ಕ್ರಿಕೆಟ್ ನಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಅದ್ಭುತ ಪ್ರದರ್ಶನ ನೀಡುತ್ತಿದ್ದೇವೆ. ಒಂದು ವೇಳೆ ಮೊದಲ ಟೆಸ್ಟ್ ಪಂದ್ಯದಲ್ಲಿ ಆಫ್ರಿಕಾ ಮೊದಲು ಬ್ಯಾಟಿಂಗ್ ಮಾಡಿದ್ದರೆ 65 ರನ್ ಗೆ ಆಲೌಟ್ ಆಗುತ್ತಿತ್ತೇನೋ. ಆದರೆ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಜೊತೆಯಾಟಕ್ಕೆ ಧನ್ಯವಾದ ಹೇಳಲೇಬೇಕು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments