Publish Date: Tue, 24 Oct 2017 (08:27 IST)
Updated Date: Tue, 24 Oct 2017 (08:29 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಕಡೆಗಣಿಸಲ್ಪಟ್ಟ ಹಿರಿಯ ಸ್ಪಿನ್ ಜೋಡಿ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಟಿ20 ಸರಣಿಯಿಂದಲೂ ಔಟ್ ಆಗಿದ್ದಾರೆ.
ಎಂಎಸ್ ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಮತ್ತೆ ಈ ಇಬ್ಬರು ಹಿರಿಯ ಆಟಗಾರರನ್ನು ಕಡೆಗಣಿಸಿದೆ. ಕಳೆದ ಕೆಲವು ಸರಣಿಗಳಿಂದ ವಿಶ್ರಾಂತಿಯ ನೆಪದಲ್ಲಿ ಈ ಇಬ್ಬರು ಹಿರಿಯ ಸ್ಪಿನ್ನರ್ ಗಳನ್ನು ಕಡೆಗಣಿಸಲಾಗುತ್ತಿದ್ದು, ಯುವ ಆಟಗಾರರಿಗೆ ಆದ್ಯತೆ ನೀಡಲಾಗುತ್ತಿದೆ.
ಮುಂಬೈ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್ ಮತ್ತು ಹೈದರಾಬಾದ್ ಮೂಲದ ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ ಹೊಸ ಮುಖಗಳು. ಕನ್ನಡಿಗ ಕೆಎಲ್ ರಾಹುಲ್ ಗೆ ಮತ್ತೆ ಸ್ಥಾನ ಕಲ್ಪಿಸಲಾಗಿದೆ. ಕಳೆದ ಕೆಲವು ಸರಣಿಗಳಲ್ಲಿ ಕಳಪೆ ಪ್ರದರ್ಶನ ನೀಡಿರುವ ಕೇದಾರ್ ಜಾದವ್ ಮತ್ತು ಅಜಿಂಕ್ಯಾ ರೆಹಾನೆ ಸ್ಥಾನ ವಂಚಿತರಾಗಿದ್ದಾರೆ. ಉಳಿದಂತೆ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿರುವ ತಂಡವನ್ನೇ ಉಳಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ