Select Your Language

Notifications

webdunia
webdunia
webdunia
webdunia

IND vs BAN: ಅಭಿಷೇಕ್‌ ಆರ್ಭಟಕ್ಕೆ ಮಕಾಡೆ ಮಲಗಿದ ಬಾಂಗ್ಲಾ: ಫೈನಲ್‌ಗೆ ಲಗ್ಗೆಯಿಟ್ಟ ಭಾರತ

Asia Cup Cricket

Sampriya

ದುಬೈ , ಬುಧವಾರ, 24 ಸೆಪ್ಟಂಬರ್ 2025 (23:47 IST)
Photo Credit X
ದುಬೈ: ಇಲ್ಲಿ ನಡೆಯುತ್ತಿರುವ ಏಷ್ಯಾ ಕಪ್‌ನ ಸೂಪರ್ ಫೋರ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 41 ರನ್‌ ಗಳಿಂದ ಮಣಿಸಿದ ಭಾರತ ಫೈನಲ್‌ಗೆ ಲಗ್ಗೆಯಿಟ್ಟಿದೆ.

ಟಾಸ್‌ ಗೆದ್ದ ಬಾಂಗ್ಲಾದೇಶ, ಫೀಲ್ಡಿಂಗ್ ಆಯ್ದು, ಭಾರತವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಅಭಿಷೇಕ್‌ ಶರ್ಮಾ ಅವರ ಅರ್ಧ ಶತಕದ ನೆರವಿನಿಂದ  20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 168 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾ 127 ರನ್‌ಗಳಿಗೆ ಆಲೌಟ್‌ ಆಯಿತು

ಭಾರತದ ಆರಂಭಿಕ ಬ್ಯಾಟರ್‌ಗಳಾದ ಅಭಿಷೇಕ್ ಶರ್ಮಾ(75 ರನ್, 37 ಎಸೆತ), ಶುಭ್ಮನ್ ಗಿಲ್( 29 ರನ್‌, 19 ಎಸೆತ) ಅವರಿಬ್ಬರು ಮೊದಲ ವಿಕೆಟ್‌ ಜತೆಯಾಟದಲ್ಲಿ 6 ಪಾಯಿಂಟ್ 2 ಓವರ್‌ಗೆ 77ರನ್ ಗಳಿಸಿ ಉತ್ತಮ ಅಡಿಪಾಯ ಹಾಕಿದ್ದರು. 

ಆದರೆ ಗಿಲ್ ಔಟ್ ಆದ ಬಳಿಕ ಬಂದ ಶಿವಂ ದುಬೆ ಮತ್ತು ಸೂರ್ಯಕುಮಾರ್ ಯಾದವ್ ಅವರು ನಿರಾಸೆ ಮೂಡಿಸಿದರು. ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ(38 ರನ್, 29ಎಸೆತ) ಭಾರತ ತಂಡವು ಸವಾಲಿನ ಮೊತ್ತ ಗಳಿಸುವಲ್ಲಿ ನೆರವಾದರು. ಬಾಂಗ್ಲಾ ಪರ ರಶೀದ್ ಹುಸೇನ್ 2 ವಿಕೆಟ್ ಪಡೆದು ಮಿಂಚಿದರು. ಈ ಪಂದ್ಯವನ್ನು ಗೆದ್ದ ತಂಡವು ಫೈನಾಲ್‌ಗೆ ಅರ್ಹತೆ ಪಡೆಯಲಿದೆ.

ಬಾಂಗ್ಲಾ ಬ್ಯಾಟರ್‌ಗಳ ಪೈಕಿ ಆರಂಭಿಕ ಆಟಗಾರ ಸೈಫ್‌ ಹಸನ್‌ 69 ರನ್‌ ಗಳಿಸಿ ಏಕಾಂಗಿ ಹೋರಾಟ ನಡೆಸಿದರು. ಅವರಿಗೆ ಉಳಿದ ಆಟಗಾರರಿಂದ ಬೆಂಬಲ ಸಿಗಲಿಲ್ಲ. ಕುಲದೀಪ್‌ ಯಾದವ್‌ ಮೂರು ವಿಕೆಟ್‌ ಪಡೆದರು. ಜಸ್‌ಪ್ರೀತ್‌ ಬೂಮ್ರಾ ಮತ್ತು ವರುಣ್‌ ಚಕ್ರವರ್ತಿ ತಲಾ ಎರಡು ವಿಕೆಟ್‌ ಪಡೆದರು.

ಸೂಪರ್‌ ಫೋರ್‌ ಹಂತದಲ್ಲಿ ಭಾರತ ಕೊನೆಯ ಪಂದ್ಯದಲ್ಲಿ ಲಂಕಾ ತಂಡವನ್ನು ಎದುರಿಸಲಿದೆ. ಬಾಂಗ್ಲಾ ತಂಡವು ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಆ ಪಂದ್ಯದಲ್ಲಿ ಗೆದ್ದ ತಂಡವು ಭಾರತದೊಂದಿಗೆ ಫೈನಲ್‌ನಲ್ಲಿ ಮುಖಾಮುಖಿಯಾಗಲಿದೆ.



Share this Story:

Follow Webdunia kannada

ಮುಂದಿನ ಸುದ್ದಿ

IND vs BAN: ಮತ್ತೇ ಅಬ್ಬರಿಸಿದ ಅಭಿಷೇಕ್‌ ಶರ್ಮಾ, ಬಾಂಗ್ಲಾರಿಗೆ ಸವಾಲಿನ ಗುರಿ