Asia Cup 2025: ಅಜೇಯ ಭಾರತದ ಓಟಕ್ಕೆ ಟಾಸ್‌ ಗೆದ್ದ ಬಾಂಗ್ಲಾ ತಂಡ ಬ್ರೇಕ್ ಹಾಕುತ್ತಾ

Sampriya
ಬುಧವಾರ, 24 ಸೆಪ್ಟಂಬರ್ 2025 (19:52 IST)
Photo Credit X
ದುಬೈ: ಇಲ್ಲಿನ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆಯುತ್ತಿರುವ ಏಷ್ಯಾ ಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶದ ನಾಯಕ ಜೇಕರ್ ಅಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಭಾರತವು 2025 ರ ಏಷ್ಯಾ ಕಪ್‌ನ ಫೈನಲ್‌ನಲ್ಲಿ ಈಗಾಗಲೇ ಒಂದು ಹೆಜ್ಜೆ ಇಟ್ಟಿದೆ. ಬುಧವಾರದ ಸೂಪರ್ ಫೋರ್ಸ್‌ನ ತನ್ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಗೆಲುವು ಸಾಧಿಸಿದರೆ ಫೈನಲ್‌ ಪ್ರವೇಶ ಖಚಿತವಾಗಲಿದೆ.

ಭಾರತದಂತೆಯೇ ಬಾಂಗ್ಲಾದೇಶವು ಶ್ರೀಲಂಕಾ ವಿರುದ್ಧದ ಜಯದೊಂದಿಗೆ ಸೂಪರ್‌ ಫೋರ್‌ ಹಂತದಲ್ಲಿ ಅಜೇಯವಾಗಿದೆ. ಇಂದು ಭಾರತ ವಿರುದ್ಧ ಗೆಲುವು ಸಾಧಿಸಿದರೆ ಬಾಂಗ್ಲಾ ತಂಡಕ್ಕೂ ಫೈನಲ್‌ ಹಾದಿ ಸುಗಮವಾಗಲಿದೆ. 

ಭಾರತ ಆರು ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿ ಸೂಪರ್ ಫೋರ್ಸ್ ಅಭಿಯಾನವನ್ನು ಆರಂಭಿಸಿತ್ತು. ಏತನ್ಮಧ್ಯೆ, ಬಾಂಗ್ಲಾದೇಶ ತನ್ನ ಮೊದಲ ಸೂಪರ್ ಫೋರ್ಸ್ ಮ್ಯಾಟ್‌ನಲ್ಲಿ ಶ್ರೀಲಂಕಾ ವಿರುದ್ಧ ನಾಲ್ಕು ವಿಕೆಟ್‌ಗಳ ಜಯದ ಹಿನ್ನೆಲೆಯಲ್ಲಿ ಈ ಪಂದ್ಯಕ್ಕೆ ಬಂದಿತು.

ಭಾರತ ತಂಡ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್‌ಪ್ರೀತ್ ಬೂಮ್ರಾ, ವರುಣ್ ಚಕ್ರವರ್ತಿ

ಬಾಂಗ್ಲಾದೇಶ ತಂಡ: ಸೈಫ್ ಹಸನ್, ತಂಜಿದ್ ಹಸನ್ ತಮೀಮ್, ಪರ್ವೇಜ್ ಹುಸೇನ್‌ ಎಮನ್, ತೌಹಿದ್ ಹೃದಯ್, ಶಮೀಮ್ ಹೊಸೈನ್, ಜೇಕರ್ ಅಲಿ (ವಿಕೆಟ್‌ ಕೀಪರ್‌), ಮೊಹಮ್ಮದ್ ಸೈಫುದ್ದೀನ್, ರಿಶಾದ್ ಹೊಸೈನ್, ತಂಝಿಮ್ ಹಸನ್ ಸಾಕಿಬ್, ನಸುಮ್ ಅಹ್ಮದ್, ಮುಸ್ತಫಿಜುರ್ 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

ಮುಂದಿನ ಸುದ್ದಿ
Show comments