Webdunia - Bharat's app for daily news and videos

Install App

ಏಷ್ಯಾ ಕಪ್ ಕ್ರಿಕೆಟ್: ಭಾರತ-ಶ್ರೀಲಂಕಾ ನಡುವೆ ಇಂದಿನ ಪಂದ್ಯ

Webdunia
ಮಂಗಳವಾರ, 12 ಸೆಪ್ಟಂಬರ್ 2023 (08:30 IST)
ಕೊಲೊಂಬೊ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಸತತ ಮೂರನೇ ದಿನ ಟೀಂ ಇಂಡಿಯಾ ಪಂದ್ಯವಾಡುತ್ತಿದೆ. ಇಂದು ಎರಡನೆಯ ಸೂಪರ್ ಫೋರ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಎದುರಿಸುತ್ತಿದೆ.

ಶ್ರೀಲಂಕಾ ಈಗಾಗಲೇ ಒಂದು ಪಂದ್ಯವಾಡಿದ್ದು ಗೆಲುವು ಕಂಡಿದೆ. ಇತ್ತ ಭಾರತ ಕೂಡಾ ನಿನ್ನೆಯಷ್ಟೇ ಪಾಕ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯ ಮಹತ್ವದ್ದಾಗಿದೆ.

ಟೀಂ ಇಂಡಿಯಾ ಸತತ ಮೂರನೇ ದಿನ ಪಂದ್ಯವಾಡುತ್ತಿರುವುದರಿಂದ ಆಟಗಾರರ ಹಿತ ದೃಷ್ಟಿಯಿಂದ ಕೆಲವು ಬದಲಾವಣೆ ಮಾಡಿಕೊಳ್ಳುವ ಸಾಧ‍್ಯತೆಯಿದೆ. ವೇಗಿ ಜಸ್ಪ್ರೀತ್ ಬುಮ್ರಾ ನಿನ್ನೆಯ ಪಂದ್ಯದಲ್ಲೇ ಕೇವಲ 5 ಓವರ್ ನಡೆಸಿ ವಿಶ್ರಾಂತಿ ಪಡೆದಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲಿ ಆಡುವುದು ಅನುಮಾನ. ಅವರ ಸ್ಥಾನದಲ್ಲಿ ಮೊಹಮ್ಮದ್ ಶಮಿ ಅವಕಾಶ ಪಡೆಯಬಹುದು. ಬ್ಯಾಟಿಂಗ್ ನಲ್ಲೂ ಕೆಲವು ಆಟಗಾರರಿಗೆ ವಿಶ್ರಾಂತಿ ದೃಷ್ಟಿಯಿಂದ ಬ್ಯಾಟಿಂಗ್ ಕ್ರಮಾಂಕ ಬದಲಾವಣೆ ಮಾಡಿದರೂ ಅಚ್ಚರಿಯಿಲ್ಲ. ಹಾಗಿದ್ದರೂ ಸೂಪರ್ ಫೋರ್ ಪಂದ್ಯವಾಗಿರುವುದರಿಂದ ಭಾರತ ಆಡುವ ಬಳಗದ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವಂತೆಯೂ ಇಲ್ಲ.  ಈ ಪಂದ್ಯ ಅಪರಾಹ್ನ 3 ಗಂಟೆಗೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಮುಂದಿನ ಸುದ್ದಿ
Show comments