ದುಬೈ: ಈ ಬಾರಿ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಯುಎಇನಲ್ಲಿ ನಡೆಯಲಿದೆ.
ಶ್ರೀಲಂಕಾದಲ್ಲಿ ಅರಾಜಕತೆ ಸೃಷ್ಟಿಯಾಗಿರುವುದರಿಂದ ಅಲ್ಲಿ ಸದ್ಯಕ್ಕೆ ಕ್ರಿಕೆಟ್ ಟೂರ್ನಿ ನಡೆಸುವುದು ಕಷ್ಟ. ಹೀಗಾಗಿ ಭದ್ರತೆಯ ದೃಷ್ಟಿಯಿಂದ ಯುಎಇಗೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟನೆ ನೀಡಿದ್ದಾರೆ.
ಈ ಬಾರಿ ಏಷ್ಯಾ ಕಪ್ ನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗುವ ಸಾಧ‍್ಯತೆಗಳಿವೆ. ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ ಟೂರ್ನಮೆಂಟ್ ನಡೆಯಲಿದೆ.