Select Your Language

Notifications

webdunia
webdunia
webdunia
webdunia

Asia Cup Cricket: ಭಾರತಕ್ಕೆ ಶಾಕ್‌: ಫೈನಲ್‌ಗೆ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅಲಭ್ಯ

Asia Cup Cricket Tournament, India Cricket, Pakistan Cricket

Sampriya

ದುಬೈ , ಭಾನುವಾರ, 28 ಸೆಪ್ಟಂಬರ್ 2025 (19:59 IST)
Photo Credit X
ದುಬೈ: ಏಷ್ಯಾ ಕಪ್ ಕ್ರಿಕೆಟ್‌ ಟೂರ್ನಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ  ಮತ್ತು ಪಾಕಿಸ್ತಾನ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿವೆ. 

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣವು ಹೈವೋಲ್ಟೇಜ್‌ ಪಂದ್ಯಕ್ಕೆ ಸಜ್ಜಾಗಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಇಂದಿನ ಪಂದ್ಯಕ್ಕೆ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಫೈನಲ್ ಕದನಕ್ಕೆ ಅಲಭ್ಯರಾಗಿದ್ದಾರೆ. ಇವರ ಜಾಗಕ್ಕೆ ರಿಂಕು ಸಿಂಗ್ ಆಯ್ಕೆ ಆಗಿದ್ದಾರೆ. ಹಾಗೆಯೆ ಕಳೆದ ಸೂಪರ್ 4 ನಲ್ಲಿ ಶ್ರೀಲಂಕಾ ವಿರುದ್ಧ ವಿಶ್ರಾಂತಿ ಪಡೆದುಕೊಂಡಿದ್ದ ಜಸ್​ಪ್ರಿತ್ ಬೂಮ್ರಾ ಕಮ್​ಬ್ಯಾಕ್ ಮಾಡಿದ್ದಾರೆ. ಶಿವಂ ದುವೆ ಕೂಡ ತಂಡಕ್ಕೆ ಮರಳಿದ್ದಾರೆ. ಅರ್ಷದೀಪ್‌ ಹೊರಗುಳಿದಿದ್ದಾರೆ.

ಭಾರತ ತಂಡ ಹೀಗಿದೆ: ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಸರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ವರುಣ್ ಚಕ್ರವರ್ತಿ.

ಪಾಕಿಸ್ತಾನ  ತಂಡ: ಸಾಹಿಬ್ಜಾದಾ ಫರ್ಹಾನ್, ಫಖರ್ ಜಮಾನ್, ಸೈಮ್ ಅಯೂಬ್, ಸಲ್ಮಾನ್ ಅಘಾ (ನಾಯಕ), ಹುಸೇನ್ ತಲತ್, ಮೊಹಮ್ಮದ್ ಹ್ಯಾರಿಸ್( ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.

Share this Story:

Follow Webdunia kannada

ಮುಂದಿನ ಸುದ್ದಿ

ಬಿಸಿಸಿಐ ಸಾರಥಿಯಾಗಿ ಮಿಥುನ್ ಮನ್ಹಾಸ್ ನೇಮಕ: ಕರ್ನಾಟಕದ ರಘುರಾಮ್ ಭಟ್ ಖಜಾಂಚಿ