Asia Cup Final: ಸ್ಪಿನ್ ಸುಳಿಗೆ ಪಾಕ್‌ ತತ್ತರ: ಭಾರತದ ಗೆಲುವಿಗೆ ಸಾಧಾರಣ ಸವಾಲು

Sampriya
ಭಾನುವಾರ, 28 ಸೆಪ್ಟಂಬರ್ 2025 (22:11 IST)
Photo Credit X
ದುಬೈ: ಏಷ್ಯಾಕಪ್‌ ಟಿ20 ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಬ್ಯಾಟರ್‌ಗಳು ಭಾರತದ ಸ್ಪಿನ್‌ ಸುಳಿಗೆ ತತ್ತರಿಸಿದರು.

ಆರಂಭಿಕ ಬ್ಯಾಟರ್‌ಗಳು ಉತ್ತಮ ಪ್ರದರ್ಶನ ನೀಡಿದರೂ  ಭಾರತದ ಎದುರು ಬೃಹತ್‌ ಮೊತ್ತ ಕಲೆಹಾಕುವ ಪಾಕ್‌ ಪ್ರಯತ್ನ ಕೈಗೂಡಲಿಲ್ಲ. 19.1 ಓವರ್‌ಗಳಲ್ಲಿ 146 ರನ್‌ಗಳಿಗೆ ಸರ್ವಪತನ ಕಂಡಿದೆ.

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ಪಂದ್ಯದಲ್ಲಿ, ಮಧ್ಯಮ ಹಾಗೂ ಕೆಳ ಕ್ರಮಾಂಕದ ಬ್ಯಾಟರ್‌ಗಳು ಸ್ಪಿನ್‌ ಸುಳಿಯಲ್ಲಿ ಸಿಲುಕಿದ ಪರಿಣಾಮ ದಿಢೀರ್‌ ಕುಸಿಯಿತು.

ಟಾಸ್‌ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್‌ ಬೌಲಿಂಗ್‌ ಆಯ್ದುಕೊಂಡರು. ಪಾಕ್‌ ಪಡೆಯ ಆರಂಭಿಕ ಬ್ಯಾಟರ್‌ಗಳಾದ ಸಾಹಿಬ್‌ಝಾದಾ ಫರ್ಹಾನ್ ಮತ್ತು ಫಖರ್‌ ಜಮಾನ್‌ ಭಾರತದ ನಾಯಕನ ನಿರ್ಧಾರವನ್ನು ತಲೆಕೆಳಗಾಗಿಸುವಂತಹ ಆಟವಾಡಿದರು.

ಈ ಜೋಡಿ ಮೊದಲ ವಿಕೆಟ್‌ಗೆ 9.4 ಓವರ್‌ಗಳಲ್ಲಿ 84 ರನ್‌ ಕಲೆಹಾಕುವ ಮೂಲಕ ಭದ್ರ ಬುನಾದಿ ಹಾಕಿಕೊಟ್ಟಿತು. ಆದರೆ, ಆ ಅಡಿಪಾಯದ ಮೇಲೆ ಬೃಹತ್‌ ಮೊತ್ತ ಪೇರಿಸಲು ಉಳಿದವರಿಗೆ ಸಾಧ್ಯವಾಗಲಿಲ್ಲ.

ಪಾಕ್‌ ಪಡೆಯ ಎಂಟು ವಿಕೆಟ್‌ಗಳು ಭಾರತದ ಸ್ಪಿನ್ನರ್‌ಗಳ ಪಾಲಾದವು. ಕುಲದೀಪ್‌ ಯಾದವ್‌ ನಾಲ್ಕು ವಿಕೆಟ್ ಕಬಳಿಸಿದರು. ವರುಣ್‌ ಚಕ್ರವರ್ತಿ, ಅಕ್ಷರ್‌ ಪಟೇಲ್‌ ಹಾಗೂ ವೇಗಿ ಜಸ್‌ಪ್ರೀತ್‌ ಬೂಮ್ರಾ ಎರಡೆರಡು ವಿಕೆಟ್‌ ಹಂಚಿಕೊಂಡರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

ಮುಂದಿನ ಸುದ್ದಿ
Show comments