ದುಬೈನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2025 ರ ಸೂಪರ್ 4 ಸುತ್ತಿನ ಅಂತಿಮ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 5 ವಿಕೆಟ್ ಕಳೆದುಕೊಂಡು ಶ್ರೀಲಂಕಾಗೆ 203 ರನ್‌ಗಳ ಗೆಲುವಿನ ಗುರಿಯನ್ನು ನೀಡಿದೆ.
ಟಾಸ್ ಗೆದ್ದ ಶ್ರೀಲಂಕಾ ಮೊದಲು ಬೌಲಿಂಗ್ ಆಯ್ದುಕೊಂಡು ಭಾರತವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.
2025 ರ ಏಷ್ಯಾ ಕಪ್‌ನಲ್ಲಿ ಇದೇ ಮೊದಲ ಬಾರಿ 200 ರನ್‌ಗಳ ಗಡಿಯನ್ನು ತಲುಪಿ, ಭಾರತ ಮತ್ತೊಂದು ದಾಖಲೆಯನ್ನು ಮಾಡಿದೆ.
ಅಭಿಷೇಕ್ ಶರ್ಮಾ 25 ಕ್ಕಿಂತ ಕಡಿಮೆ ಎಸೆತಗಳಲ್ಲಿ ತಮ್ಮ ಆರನೇ ಅರ್ಧಶತಕ ಗಳಿಸಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ರೋಹಿತ್ 159 ಪಂದ್ಯಗಳಲ್ಲಿ ಈ ಸಾಧನೆ ಮಾಡಿದರೆ, ಅಭಿಷೇಕ್ ಶರ್ಮಾ ಕೇವಲ 23 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಅಭಿಷೇಕ್ ಶರ್ಮಾ ಏಷ್ಯಾಕಪ್‌ನಲ್ಲಿ 300 ರನ್‌ಗಳನ್ನು ತಲುಪಿದ್ದಾರೆ.