Daily Horoscope

Select Your Language

Notifications

webdunia
webdunia
webdunia
webdunia

ಏಷ್ಯಾ ಕಪ್ ನಲ್ಲಿ ಇಂದು ಟೀಂ ಇಂಡಿಯಾಗೆ ಮೊದಲ ಪಂದ್ಯ: ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ಏಷ್ಯಾ ಕಪ್ ಕ್ರಿಕೆಟ್
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಟೀಂ ಇಂಡಿಯಾ ದುರ್ಬಲ ಹಾಂಗ್ ಕಾಂಗ್ ನ್ನು ಮೊದಲ ಪಂದ್ಯದಲ್ಲಿ ಎದುರಿಸಲಿದೆ.

ಕ್ರಿಕೆಟ್ ಶಿಶು ಹಾಂಗ್ ಕಾಂಗ್ ಭಾರತದ ಪಾಲಿಗೆ ಸುಲಭ ತುತ್ತಾಗಿದ್ದರೂ, ನಾಳೆಯ ಪಾಕಿಸ್ತಾನ ಪಂದ್ಯಕ್ಕೆ ತಯಾರಿ ನಡೆಸಲು ಈ ಪಂದ್ಯವನ್ನು ವೇದಿಕೆಯಾಗಿ ಟೀಂ ಇಂಡಿಯಾ ಬಳಸಬಹುದು.

ಈಗಾಗಲೇ ಟೂರ್ನಮೆಂಟ್ ನಲ್ಲಿ ಪಾಕಿಸ್ತಾನ ವಿರುದ್ಧ 8 ವಿಕೆಟ್ ಗಳ ಸೋಲು ಅನುಭವಿಸಿರುವ ಹಾಂಗ್ ಕಾಂಗ್ ಟೀಂ ಇಂಡಿಯಾ ವಿರುದ್ಧ ಗೆಲ್ಲುವುದು ಸುಲಭವೇನಲ್ಲ. ಹಾಗಿದ್ದರೂ ಇಂಗ್ಲೆಂಡ್  ಪ್ರವಾಸದ ಕಹಿ ಮರೆಯಲು ಟೀಂ ಇಂಡಿಯಾ ಆಟಗಾರರಿಗೆ ಇದು ಉತ್ತಮ ವೇದಿಕೆಯಾಗಲಿದೆ.

ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ಹಾಗಿದ್ದರೂ ಎದುರಾಳಿ ತಂಡಗಳಿಗೆ ಹೋಲಿಸಿದರೆ ಟೀಂ ಇಂಡಿಯಾ ಬಲಿಷ್ಠವಾಗಿದೆ.

ಇಂದು ಸಂಜೆ 5 ಗಂಟೆಗೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾದ ಐದು ವಿಕೆಟ್ ಕೀಳುವ ಶಪಥ ಮಾಡಿದ ಪಾಕ್ ಬೌಲರ್