ಹ್ಯಾಂಗ್ ಝೂ: 19 ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಬಾಂಗ್ಲಾದೇಶವನ್ನು 8 ವಿಕೆಟ್ ಗಳಿಂದ ಸೋಲಿಸಿ ಫೈನಲ್ ಗೇರಿದೆ. ಇದರಿಂದಾಗಿ ಭಾರತಕ್ಕೆ ಕನಿಷ್ಠ ಬೆಳ್ಳಿ ಪದಕ ಖಾತ್ರಿಯಾಗಿದೆ.
ಬಂಗಾರದ ಪದಕಕ್ಕಾಗಿ ಆಡಲಿರುವ ಫೈನಲ್ ಪಂದ್ಯದಲ್ಲಿ ಭಾರತ ಇಂದು ನಡೆಯಲಿರುವ ಇನ್ನೊಂದು ಸೆಮಿಫೈನಲ್ ನಲ್ಲಿ ವಿಜೇತರಾಗುವ ಪಾಕಿಸ್ತಾನ ಅಥವಾ ಶ್ರೀಲಂಕಾ ವಿರುದ್ಧ ಆಡಲಿದೆ. ಕಳೆದ ಎರಡು ಪಂದ್ಯಗಳಲ್ಲಿ ಭಾರತ ತಂಡ ಖಾಯಂ ನಾಯಕಿ ಹರ್ಮನ್ ಪ್ರೀತ್ ಕೌರ್ ಅನುಪಸ್ಥಿತಿಯಲ್ಲಿ ಆಡಿತ್ತು. ಅಶಿಸ್ತಿನ ವರ್ತನೆ ತೋರಿದ್ದಕ್ಕೆ ಹರ್ಮನ್ ಗೆ ಐಸಿಸಿ ಎರಡು ಪಂದ್ಯಗಳ ನಿಷೇಧ ಶಿಕ್ಷೆ ವಿಧಿಸಿತ್ತು.
ಈ ಕಾರಣಕ್ಕೆ ಹರ್ಮನ್ ಕಳೆದ ಎರಡು ಪಂದ್ಯಗಳನ್ನು ಆಡಿರಲಿಲ್ಲ. ಆದರೆ ನಾಳೆ ನಡೆಯಲಿರುವ ಫೈನಲ್ ಪಂದ್ಯಕ್ಕೆ ಹರ್ಮನ್ ನಿಷೇಧ ಶಿಕ್ಷೆ ಮುಗಿಸಿ ಕಮ್ ಬ್ಯಾಕ್ ಮಾಡಲಿದ್ದಾರೆ. ಕಳೆದ ಎರಡು ಪಂದ್ಯಗಳಲ್ಲಿ ಹರ್ಮನ್ ಅನುಪಸ್ಥಿತಿಯಲ್ಲಿ ಸ್ಮೃತಿ ಮಂಧನಾ ನಾಯಕಿಯಾಗಿ ಕರ್ತವ್ಯ ನಿರ್ವಹಿಸಿದ್ದರು.