Publish Date: Fri, 06 Oct 2023 (09:20 IST)
Updated Date: Fri, 06 Oct 2023 (09:22 IST)
ಹ್ಯಾಂಗ್ ಝೂ: ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ವಿಭಾಗದಲ್ಲಿ ಬಾಂಗ್ಲಾದೇಶವನ್ನು 9 ವಿಕೆಟ್ ಗಳಿಂದ ಸೋಲಿಸಿದ ಟೀಂ ಇಂಡಿಯಾ ಫೈನಲ್ ಗೆ ಲಗ್ಗೆಯಿಟ್ಟಿದೆ.
ಫೈನಲ್ ನಲ್ಲಿ ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 96 ರನ್ ಗಳಿಸಿತು.
ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ 9.2 ಓವರ್ ಗಳಲ್ಲೇ 1 ವಿಕೆಟ್ ನಷ್ಟಕ್ಕೆ 97 ರನ್ ಗಳಿಸಿ ಗೆಲುವು ಕಂಡಿತು. ನಾಯಕ ಋತುರಾಜ್ ಗಾಯಕ್ ವಾಡ್ ಔಟಾಗದೇ 40 ಮತ್ತು ತಿಲಕ್ ವರ್ಮ ಔಟಾಗದೇ 55 ರನ್ ಗಳಿಸಿದರು. ಇದರೊಂದಿಗೆ ಟೀಂ ಇಂಡಿಯಾ ಫೈನಲ್ ತಲುಪಿದ್ದು ಗೆದ್ದರೆ ಚಿನ್ನ ಸೋತರೆ ಬೆಳ್ಳಿ ಪದಕ ಖಚಿತಪಡಿಸಿದೆ. ನಾಳೆ ಫೈನಲ್ ಪಂದ್ಯ ನಡೆಯಲಿದೆ.