ಹ್ಯಾಂಗ್ ಝೂ: ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ನಲ್ಲಿ ನೇಪಾಳ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ ಟೀಂ ಇಂಡಿಯಾ ಆರಂಭಿಕ ಯಶಸ್ವಿ ಜೈಸ್ವಾಲ್ ಎರಡು ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.
ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿದು 100 ರನ್ ಗಳಿಸಿದರು. ಇದರಿಂದಾಗಿ ಭಾರತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 202 ರನ್ ಗಳ ಬೃಹತ್ ಮೊತ್ತ ಪೇರಿಸಿತು. 22 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ಜೈಸ್ವಾಲ್ ಮತ್ತೆ 25 ಎಸೆತ ಎದುರಿಸಿ ಶತಕ ಪೂರೈಸಿದ್ದರು!
ಇದರೊಂದಿಗೆ ಜೈಸ್ವಾಲ್ ಎರಡು ದಾಖಲೆ ಮಾಡಿದರು. 21 ವರ್ಷದ ಜೈಸ್ವಾಲ್ ಈ ಮೂಲಕ ಏಷ್ಯನ್ ಗೇಮ್ಸ್ ನಲ್ಲಿ ಶತಕ ಸಿಡಿಸಿದ ಕಿರಿಯ ಆಟಗಾರ ಎಂಬ ದಾಖಲೆ ಮಾಡಿದರು. ಅಲ್ಲದೆ, ಭಾರತದ ಪರ ಬಹುಕ್ರೀಡಾ ಕೂಟದಲ್ಲಿ ಶತಕ ಸಿಡಿಸಿದ ಮೊದಲ ಕ್ರಿಕೆಟಿಗ ಎಂಬ ದಾಖಲೆ ಅವರದ್ದಾಗಿದೆ.