AUS vs IND ODI: ರೋಹಿತ್, ವಿರಾಟ್, ಶುಭಮನ್‌ ಪೆವಿಲಿಯನ್‌ ಪರೇಡ್‌: ಭಾರತಕ್ಕೆ ಆರಂಭಿಕ ಆಘಾತ

Sampriya
ಭಾನುವಾರ, 19 ಅಕ್ಟೋಬರ್ 2025 (10:03 IST)
Photo Credit X
ಪರ್ತ್‌: ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕ ಆಘಾತ ಅನುಭವಿಸಿದೆ. ನಿರೀಕ್ಷೆ ಮೂಡಿಸಿದ್ದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಮತ್ತು ನಾಯಕ ಶುಭಮನ್‌ ಗಿಲ್‌ ವೈಫಲ್ಯ ಅನುಭವಿಸಿದರು. 

ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಆತಿಥೇಯ ಆಸ್ಟ್ರೇಲಿಯಾ ಬೌಲಿಂಗ್‌ ಆಯ್ದುಕೊಂಡಿತು. ಈ ಹಣಾಹಣಿ ಪರ್ತ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟೀಂ ಇಂಡಿಯಾಗೆ ಆರಂಭದಲ್ಲೇ ಮುಗ್ಗರಿಸಿದೆ.

ಇನಿಂಗ್ಸ್‌ ಆರಂಭಿಸಿದ ನಾಯಕ ಶುಭಮನ್‌ ಗಿಲ್‌, ಮಾಜಿ ನಾಯಕ ರೋಹಿತ್‌ ಶರ್ಮಾ ಹಾಗೂ ರನ್‌ ವಿರಾಟ್‌ ಕೊಹ್ಲಿ ಬೇಗನೆ ಪೆವಿಲಿಯನ್‌ ಸೇರಿಕೊಂಡರು.

ಟೆಸ್ಟ್ ಹಾಗೂ ಟಿ20 ಮಾದರಿಗೆ ಈಗಾಗಲೇ ವಿದಾಯ ಹೇಳಿರುವ ರೋಹಿತ್‌, ವಿರಾಟ್‌, ಬರೋಬ್ಬರಿ 7 ತಿಂಗಳ ಬಳಿಕ ಟೀಂ ಇಂಡಿಯಾಗೆ ಮರಳಿದ್ದಾರೆ. ರೋಹಿತ್‌ 8 ರನ್‌ ಗಳಿಸಿದರೆ, ಕೊಹ್ಲಿ ಸೊನ್ನೆ ಸುತ್ತಿದರು. ನಾಯಕನಾಗಿ ಮೊದಲ ಏಕದಿನ ಸರಣಿ ಆಡುತ್ತಿರುವ ಗಿಲ್‌ (10 ರನ್‌) ಕೂಡ ನಿರಾಸೆ ಮೂಡಿಸಿದರು.

ಮಳೆ ಅಡಚಣೆ: ಮಳೆಯಿಂದಾಗಿ ಆಟ ನಿಂತಿದೆ. ಸದ್ಯ 8.5 ಓವರ್‌ಗಳು ಮುಕ್ತಾಯವಾಗಿದ್ದು ಭಾರತದ ಮೊತ್ತ 3 ವಿಕೆಟ್‌ಗೆ 25 ರನ್‌ ಆಗಿದೆ. ಉಪನಾಯಕ ಶ್ರೇಯಸ್‌ ಅಯ್ಯರ್‌ (2) ಹಾಗೂ ಇನ್ನೂ ಖಾತೆ ತೆರೆಯದ ಆಲ್‌ರೌಂಡರ್‌ ಅಕ್ಷರ್‌ ಪಟೇಲ್‌ ಕ್ರೀಸ್‌ನಲ್ಲಿದ್ದಾರೆ.

ಆಸ್ಟ್ರೇಲಿಯಾ ವೇಗಿಗಳಾದ ಮಿಚೆಲ್‌ ಸ್ಟಾರ್ಕ್‌, ಜೋಶ್‌ ಹ್ಯಾಜಲ್‌ವುಡ್‌ ಮತ್ತು ನೇಥನ್‌ ಎಲಿಸ್‌ ತಲಾ ಒಂದೊಂದು ವಿಕೆಟ್‌ ಉರುಳಿಸಿದ್ದಾರೆ. ಆಂಧ್ರ ಪ್ರದೇಶದ ಆಲ್‌ರೌಂಡರ್ ನಿತೀಶ್‌ ಕುಮಾರ್‌ ರೆಡ್ಡಿ ಈ ಪಂದ್ಯದ ಮೂಲಕ ಭಾರತದ ಪರ ಏಕದಿನ ಮಾದರಿಗೆ ಪದಾರ್ಪಣೆ ಮಾಡಿದರು. <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂವರು ಕ್ರಿಕೆಟಿಗರ ಭವಿಷ್ಯವನ್ನೇ ಕೊಂದು ಹಾಕಿದ ಬಿಸಿಸಿಐ: ಇದೆಂಥಾ ಅನ್ಯಾಯ

ಮೊದಲ ಪಂದ್ಯದಲ್ಲಿ ಫೇಲ್ ಆಗಿದ್ದಕ್ಕೆ ರೋಹಿತ್ ಶರ್ಮಾರದ್ದು ಏನು ಕಮಿಟ್ ಮೆಂಟ್

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

ಮುಂದಿನ ಸುದ್ದಿ
Show comments