Publish Date: Sun, 10 Jan 2021 (09:29 IST)
Updated Date: Sun, 10 Jan 2021 (09:31 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಆಸ್ಟ್ರೇಲಿಯಾ ಇತ್ತೀಚೆಗಿನ ವರದಿ ಬಂದಾಗ 5 ವಿಕೆಟ್ ನಷ್ಟಕ್ಕೆ 301 ರನ್ ಗಳಿಸಿದೆ. ಮೊದಲ ಇನಿಂಗ್ಸ್ ಮುನ್ನಡೆಯೂ ಸೇರಿ ಆಸೀಸ್ ಮೊತ್ತ ಈಗ 395 ಕ್ಕೇರಿದೆ.
ಇಂದು ಪಂದ್ಯದ ನಾಲ್ಕನೇ ದಿನವಾಗಿದ್ದು, ಇನ್ನು ಭಾರತಕ್ಕೆ ಗೆಲುವು ಮರೀಚಿಕೆಯಾಗಿದೆ. ಸದ್ಯಕ್ಕೆ ಆಸೀಸ್ ಪರ ಬ್ಯಾಟಿಂಗ್ ಮಾಡುತ್ತಿರುವ ಕ್ಯಾಮರೋನ್ ಗ್ರೀನ್ 74 ಮತ್ತು ಟಿಮ್ ಪೇಯ್ನ್ 38 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ಮೊದಲ ಇನಿಂಗ್ಸ್ ನಲ್ಲಿ ಶತಕ ಗಳಿಸಿದ್ದ ಸ್ಟೀವ್ ಸ್ಮಿತ್ 81 ರನ್ ಗಳಿಸಿ ಔಟಾದರು. ಲಬುಶೇನ್ 73 ರನ್ ಗಳಿಸಿದರು. ಭಾರತದ ಪರ ರವಿಚಂದ್ರನ್ ಅಶ್ವಿನ್, ನವದೀಪ್ ಸೈನಿ ತಲಾ 2 ವಿಕೆಟ್, ಮೊಹಮ್ಮದ್ ಸಿರಾಜ್ 1 ವಿಕೆಟ್ ಕಬಳಿಸಿದ್ದಾರೆ.