Webdunia - Bharat's app for daily news and videos

Install App

ಭಾರತ-ಆಸೀಸ್ ಟಿ20: ಪ್ರಮುಖ ಬೌಲರ್ ಗಳ ವೈಫಲ್ಯದಿಂದ ಟೀಂ ಇಂಡಿಯಾಗೆ ಸೋಲು

Webdunia
ಬುಧವಾರ, 21 ಸೆಪ್ಟಂಬರ್ 2022 (07:56 IST)
ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಮೊದಲ ಟಿ20 ಪಂದ್ಯವನ್ನು ಆಸೀಸ್ 4 ವಿಕೆಟ್ ಗಳಿಂದ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 208 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು. ಹಾಗಿದ್ದರೂ ಬೌಲರ್ ಗಳ ವೈಫಲ್ಯದಿಂದಾಗಿ ಎದುರಾಳಿಗಳು ಈ ಮೊತ್ತವನ್ನು 19.2 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 211 ರನ್ ಗಳಿಸುವ ಮೂಲಕ ಗೆಲುವು ಕಂಡರು. ಆಸ್ಟ್ರೇಲಿಯಾ ಪರ ಕ್ಯಾಮರೂನ್ ಗ್ರೀನ್ 61,  ಸ್ಟೀವ್ ಸ್ಮಿತ್ 35, ಮ್ಯಾಥ್ಯೂ ವೇಡ್ 45 ರನ್ ಗಳಿಸಿದರು.

ಭಾರತಕ್ಕೆಎಲ್ಲಕ್ಕಿಂತ ಮುಖ್ಯವಾಗಿ ಕೈಕೊಟ್ಟಿದ್ದ ಪ್ರಮುಖ ಬೌಲರ್ ಗಳು ಭುವನೇಶ್ವರ್ ಕುಮಾರ್ ನಾಲ್ಕು ಓವರ್ ಗಳ ಕೋಟಾದಲ್ಲಿ ವಿಕೆಟ್ ಇದಲ್ಲೇ 52 ರನ್ ಬಿಟ್ಟುಕೊಟ್ಟರೆ ಹರ್ಷಲ್ ಪಟೇಲ್ 49 ರನ್ ನೀಡಿದರು. ಯಜುವೇಂದ್ರ ಚಾಹಲ್ 1 ವಿಕೆಟ್ ಕಿತ್ತರೂ 3.5 ಓವರ್ ಗಳಲ್ಲಿ 42 ರನ್ ಬಿಟ್ಟುಕೊಟ್ಟರು. ಪರಿಣಾಮಕಾರಿ ಬೌಲಿಂಗ್ ನಡೆಸಿದ್ದು ಅಕ್ಸರ್ ಪಟೇಲ್ ಅವರು ಕೇವಲ 17 ರನ್ ಬಿಟ್ಟುಕೊಟ್ಟು 3 ವಿಕೆಟ್ ಕಬಳಿಸಿದರು. 2 ವಿಕೆಟ್ ಉಮೇಶ್ ಯಾದವ್ ಪಾಲಾಯಿತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments