Select Your Language

Notifications

webdunia
webdunia
webdunia
webdunia

ಆಸ್ಟ್ರೇಲಿಯಾಗೆ ಚೊಚ್ಚಲ ಟಿ20 ವಿಶ್ವಕಪ್ ಕಿರೀಟ

ಆಸ್ಟ್ರೇಲಿಯಾಗೆ ಚೊಚ್ಚಲ ಟಿ20 ವಿಶ್ವಕಪ್ ಕಿರೀಟ
ದುಬೈ , ಸೋಮವಾರ, 15 ನವೆಂಬರ್ 2021 (08:16 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ನಲ್ಲಿ ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್ ಗಳಿಂದ ಭರ್ಜರಿಯಾಗಿ ಸೋಲಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು. ನಾಯಕನ ಆಟವಾಡಿದ ಕೇನ್ ವಿಲಿಯಮ್ಸನ್ 85 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆಸೀಸ್ ಗೆ ಡೇವಿಡ್ ವಾರ್ನರ್ 53 ರನ್ ಗಳಿಸಿ ಉತ್ತಮ ಆರಂಭ ನೀಡಿದರು. ನಾಯಕ ಫಿಂಚ್ ಕೇವಲ 5 ರನ್ ಗಳಿಗೆ ಔಟಾದರೂ 77 ರನ್ ಗಳಿಸಿದ ಮಿಚೆಲ್ ಮಾರ್ಷ್ ಅಜೇಯ 28 ರನ್ ಗಳಿಸಿದ ಗ್ಲೆನ್ ಮ್ಯಾಕ್ಸ್ ವೆಲ್ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಅಂತಿಮವಾಗಿ ಆಸೀಸ್ 18.5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಮೊದಲ ಬಾರಿಗೆ ಐಸಿಸಿ ಟಿ20 ವಿಶ್ವಕಪ್ ಗೆದ್ದ ಸಾಧನೆ ಮಾಡಿತು. ಇದರೊಂದಿಗೆ ಏಕದಿನ, ಟಿ20 ಎರಡೂ ವಿಶ್ವಕಪ್ ಗೆಲುವಿನ ಸಾಧನೆ ಮಾಡಿದ ತಂಡಗಳ ಸಾಲಿಗೆ ಸೇರಿಕೊಂಡಿತು.

Share this Story:

Follow Webdunia kannada

ಮುಂದಿನ ಸುದ್ದಿ

ಅಂತೂ ಇಂತೂ ದ್ರಾವಿಡ್ ಸ್ಥಾನ ತುಂಬಲು ಒಪ್ಪಿದ ವಿವಿಎಸ್ ಲಕ್ಷ್ಮಣ್