Publish Date: Fri, 27 Nov 2020 (08:58 IST)
Updated Date: Fri, 27 Nov 2020 (09:00 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಭಾರತ ತಂಡಕ್ಕೆ ಶಿಖರ್ ಧವನ್ ಜೊತೆಯಾಗಿ ಕನ್ನಡಿಗ ಮಯಾಂಕ್ ಅಗರ್ವಾಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಟೀಂ ಇಂಡಿಯಾ ತಂಡ ಹೀಗಿದೆ:
ವಿರಾಟ್ ಕೊಹ್ಲಿ, ಶಿಖರ್ ಧವನ್, ಮಯಾಂಕ್ ಅಗರ್ವಾಲ್, ಶ್ರೇಯಸ್ ಐಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಾಹಲ್, ನವದೀಪ್ ಸೈನಿ.