Publish Date: Sun, 24 Feb 2019 (19:07 IST)
Updated Date: Sun, 24 Feb 2019 (19:09 IST)
ವಿಶಾಖಪಟ್ಟಣ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಆಸೀಸ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಇತ್ತೀಚೆಗಿನ ವರದಿ ಬಂದಾಗಿ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ ಒಂದು ಓವರ್ ನಲ್ಲಿ 1 ರನ್ ಗಳಿಸಿದೆ. ಬಹುದಿನಗಳ ನಂತರ ಟೀಂ ಇಂಡಿಯಾದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಗೆ ಅವಕಾಶ ಸಿಕ್ಕಿದೆ. ಉಳಿದಂತೆ ರಿಷಬ್ ಪಂತ್ ಕೂಡಾ ಸ್ಥಾನ ಪಡೆದಿದ್ದಾರೆ. ಯುವ ಮಯಾಂಕ್ ಮಾರ್ಕಂಡೆ ಚೊಚ್ಚಲ ಪಂದ್ಯವಾಡುತ್ತಿದ್ದಾರೆ. ಆರಂಭಿಕರಾಗಿ ಭಾರತದ ಪರ ರಾಹುಲ್ ಮತ್ತು ರೋಹಿತ್ ಶರ್ಮಾ ಕಣಕ್ಕಿಳಿದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ