ಮತ್ತೆ ಪಾಕಿಸ್ತಾನ ತಂಡಕ್ಕೆ ನಾಯಕರಾದ ಬಾಬರ್ ಅಜಮ್

Krishnaveni K
ಭಾನುವಾರ, 31 ಮಾರ್ಚ್ 2024 (13:42 IST)
Photo Courtesy: Twitter
ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕರಾಗಿ ಮತ್ತೊಮ್ಮೆ ಸ್ಟಾರ್ ಬ್ಯಾಟಿಗ ಬಾಬರ್ ಅಜಮ್ ರನ್ನು ಆಯ್ಕೆ ಮಾಡಲಾಗಿದೆ. ಇತ್ತೀಚೆಗೆ ಪಾಕ್ ತಂಡ ಕಳಪೆ ಪ್ರದರ್ಶನ ಗಮನಿಸಿ ಮತ್ತೆ ಬಾಬರ್ ಗೆ ಪಟ್ಟ ಕಟ್ಟಲಾಗಿದೆ.

ಭಾರತದಲ್ಲಿ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಹೀನಾಯ ಸೋಲು ಅನುಭವಿಸಿದ ಬಳಿಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಬಾಬರ್ ಅಜಮ್ ರನ್ನು ನಾಯಕತ್ವದಿಂದ ಕಿತ್ತು ಹಾಕಿತ್ತು. ಈ ವೇಳೆ ತಂಡದಲ್ಲಿ ಆಂತರಿಕ ಕಲಹವೂ ಇತ್ತು ಎನ್ನಲಾಗಿದೆ.

ಇದಾದ ಬಳಿಕ ಟಿ20 ಮತ್ತು ಏಕದಿನ ತಂಡಕ್ಕೆ ವೇಗಿ ಶಾಹಿನ್ ಅಫ್ರಿದಿ ಮತ್ತು ಟೆಸ್ಟ್ ತಂಡಕ್ಕೆ ಶಾನ್ ಮಸೂದ್ ರನ್ನು ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಇವರಿಬ್ಬರ ನಾಯಕತ್ವದಲ್ಲಿ ಪಾಕ್ ತಂಡ ಹೇಳಿಕೊಳ್ಳುವಂತಹ ಸಾಧನೆಯನ್ನೇನೂ ಮಾಡಲಿಲ್ಲ. ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ 1-4 ಅಂತರದಿಂದ ಪಾಕ್ ಸೋತಿತ್ತು. ಟೆಸ್ಟ್ ನಲ್ಲೂ ಆಸ್ಟ್ರೇಲಿಯಾ ವಿರುದ್ಧ 0-3  ಅಂತರದಿಂದ ಸೋತಿತ್ತು. ಹೀಗಾಗಿ ಮತ್ತೆ ಬಾಬರ್ ಗೇ ಮಣೆ ಹಾಕಲಾಗಿದೆ.

ಮುಂಬರುವ ಟಿ20 ವಿಶ್ವಕಪ್ ನಲ್ಲಿ ಪಾಕ್ ತಂಡವನ್ನು ಬಾಬರ್ ಅಜಮ್ ಮುನ್ನಡೆಸಲಿದ್ದಾರೆ. ಇದುವರೆಗೆ ಪಾಕಿಸ್ತಾನ ಪರ ಬಾಬರ್ 133 ಪಂದ್ಯಗಳಲ್ಲಿ ನಾಯಕರಾಗಿದ್ದು ಈ ಪೈಕಿ 78 ಗೆಲುವು, 43 ಸೋಲು ಕಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments