Select Your Language

Notifications

webdunia
webdunia
webdunia
webdunia

ಇಂಗ್ಲೆಂಡ್ ವಿರುದ್ಧ ಬಾಂಗ್ಲಾದೇಶ ಬ್ಯಾಟಿಂಗ್

ಇಂಗ್ಲೆಂಡ್ ವಿರುದ್ಧ ಬಾಂಗ್ಲಾದೇಶ ಬ್ಯಾಟಿಂಗ್
Dhaka , ಶುಕ್ರವಾರ, 28 ಅಕ್ಟೋಬರ್ 2016 (10:52 IST)
ಢಾಕಾ: ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡಿದೆ.

ಇತ್ತೀಚೆಗಿನ ವರದಿ ಬಂದಾಗ 1 ವಿಕೆಟ್ ಕಳೆದುಕೊಂಡು 85 ರನ್ ಗಳಿಸಿದೆ. ತಮೀಮ್ ಇಕ್ಬಾಲ್ ಅರ್ಧಶತಕ (54) ಗಳಿಸಿ ಕ್ರೀಸ್ ನಲ್ಲಿದ್ದಾರೆ. ಅವರ ಜತೆ ಮೊಮಿನುಲ್ ಹಕ್ 25 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇಂಗ್ಲೆಂಡ್ ವೇಗಿ ಕ್ರಿಸ್ ವೋಕ್ಸ್ ಒಂದು ವಿಕೆಟ್ ಕಿತ್ತಿದ್ದಾರೆ.

ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಪರ ಝಫರ್ ಅನ್ಸಾರಿ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದಾರೆ.  ಇಂಗ್ಲೆಂಡ್ ಎರಡು ಟೆಸ್ಟ್ ಪಂದ್ಯಗಳ ಕಿರು ಸರಣಿ ಆಡುತ್ತಿದ್ದು, ಕಳೆದ ಪಂದ್ಯದಲ್ಲಿ ರೋಚಕವಾಗಿ ಗೆದ್ದಿತ್ತು. ಇದರ ನಂತರ ಅದು ಟೆಸ್ಟ್ ಸರಣಿ ಆಡಲು ಭಾರತಕ್ಕೆ ಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಬಡ್ಡಿ ವಿಶ್ವಕಪ್ ಗೆದ್ದವರಿಗೆ ಹತ್ತೇ ಲಕ್ಷ!