Webdunia - Bharat's app for daily news and videos

Install App

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ನಲ್ಲೂ ಬ್ಯಾಟರ್‌ಗಳ ಪೆವಿಲಿಯನ್‌ ಪೆರೇಡ್‌: 150ಕ್ಕೆ ಕುಸಿದ ಭಾರತ

Sampriya
ಶುಕ್ರವಾರ, 22 ನವೆಂಬರ್ 2024 (14:10 IST)
Photo Courtesy X
ಪರ್ತ್: ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಹೀನಾಯವಾಗಿ ಸೋತ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧವೂ ಮುಗ್ಗರಿಸಿದೆ. ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟರ್‌ಗಳು ಪೆವಿಲಿಯನ್‌ ಪರೇಡ್‌ ನಡೆಸಿದ್ದಾರೆ.

ಬ್ಯಾಟಿಂಗ್ ವೈಫಲ್ಯ ಅನುಭವಿಸಿರುವ ಟೀಮ್ ಇಂಡಿಯಾ ಮೊದಲ ದಿನದಾಟದಲ್ಲೇ 49.4 ಓವರ್‌ಗಳಲ್ಲಿ 150 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿದೆ. ತಂಡದ ಪರ ನಿತೀಶ್ ಕುಮಾರ್ ರೆಡ್ಡಿ ಗರಿಷ್ಠ 41 ರನ್ ಗಳಿಸಿದರು.

ರಿಷಭ್ ಪಂತ್ 37 ಹಾಗೂ ಕೆ.ಎಲ್. ರಾಹುಲ್ 26 ರನ್ ಗಳಿಸಿದರು. ಯಶಸ್ವಿ ಜೈಸ್ವಾಲ್‌, ವಿರಾಟ್ ಕೊಹ್ಲಿ, ದೇವದತ್ತ ಪಡಿಕ್ಕಲ್, ಧ್ರುವ್ ಜುರೇಲ್ ಹಾಗೂ ವಾಷಿಂಗ್ಟನ್ ಸುಂದರ್  ವೈಫಲ್ಯ ಅನುಭವಿಸಿದರು.

ಟಾಸ್ ಗೆದ್ದ ಟೀಮ್ ಇಂಡಿಯಾ ಉಸ್ತುವಾರಿ ನಾಯಕ ಜಸ್‌ಪ್ರೀತ್ ಬೂಮ್ರಾ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಆದರೆ ತಂಡದ ಯೋಜನೆಗಳೆಲ್ಲ ತಲೆಕೆಳಗಾದವು.
ಕೆ.ಎಲ್.ರಾಹುಲ್ ಸ್ವಲ್ಪ ಹೊತ್ತು ಪ್ರತಿರೋಧ ಒಡ್ಡಿದರೂ ಊಟದ ವಿರಾಮಕ್ಕೂ ಮೊದಲು ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದರು. ಕೆ.ಎಲ್. ರಾಹುಲ್ 74 ಎಸೆತಗಳಲ್ಲಿ 26 ರನ್ ಗಳಿಸಿದರು.

ಚೊಚ್ಚಲ ಪಂದ್ಯ ಆಡುತ್ತಿರುವ ನಿತೀಶ್ 41 ರನ್ ಗಳಿಸಿದರು. ಇನ್ನುಳಿದಂತೆ ಧ್ರುವ್ ಜುರೇಲ್ 11, ವಾಷಿಂಗ್ಟನ್ ಸುಂದರ್ 4, ಹರ್ಷೀತ್ ರಾಣಾ 7 ಮತ್ತು ಜಸ್‌ಪ್ರೀತ್ ಬೂಮ್ರಾ 8 ರನ್ ಗಳಿಸಿ ನಿರ್ಗಮಿಸಿದರು.

ಆಸ್ಟ್ರೇಲಿಯಾದ ಪರ ಜೋಶ್ ಹ್ಯಾಜಲ್‌ವುಡ್ ನಾಲ್ಕು, ನಾಯಕ ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಹಾಗೂ ಮಿಚೆಲ್ ಮಾರ್ಷ್ ತಲಾ ಎರಡು ವಿಕೆಟ್‌ಗಳನ್ನು ಹಂಚಿಕೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments