Webdunia - Bharat's app for daily news and videos

Install App

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾಗೆ ಮಾತ್ರ ಈ ಸ್ಪೆಷಲ್ ವಿನಾಯ್ತಿ ನೀಡಿದ ಬಿಸಿಸಿಐ

Krishnaveni K
ಸೋಮವಾರ, 12 ಆಗಸ್ಟ್ 2024 (16:15 IST)
ಮುಂಬೈ: ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ದೇಶೀಯ ಕ್ರಿಕೆಟ್ ಟೂರ್ನಿ ಆಡದೇ ಎಷ್ಟೋ ಸಮಯವಾಗಿದೆ. ಇದೀಗ ದುಲೀಪ್ ಟ್ರೋಫಿ ಟೂರ್ನಿ ನಡೆಯಲಿದ್ದು, ರೋಹಿತ್, ಕೊಹ್ಲಿ, ಬುಮ್ರಾಗೆ ಈ ಟೂರ್ನಿಯಿಂದ ವಿನಾಯ್ತಿ ಸಿಗಲಿದೆ.

ಇತ್ತೀಚೆಗಿನ ದಿನಗಳಲ್ಲಿ ವಿರಾಟ್ ಕೊಹ್ಲಿ ಹೇಳಿಕೊಳ್ಳುವ ಫಾರ್ಮ್ ನಲ್ಲಿಲ್ಲ. ರೋಹಿತ್ ಶರ್ಮಾ ಕೂಡಾ ಸುದೀರ್ಘ ಮಾದರಿಯ ಆಟದಲ್ಲಿ ದೊಡ್ಡ ಮೊತ್ತ ಗಳಿಸಿದ್ದು ಅಪರೂಪ ಎನ್ನುವಂತಾಗಿದೆ.  ಸದ್ಯದಲ್ಲೇ ಚಾಂಪಿಯನ್ಸ್ ಟ್ರೋಫಿ, ಮಹತ್ವದ ಟೆಸ್ಟ್ ಸರಣಿಗಳು ಭಾರತ ಮುಂದಿದ್ದು ಈ ಸರಣಿಗಳಿಗೆ ತಯಾರಾಬೇಕಿದೆ.

ಆದರೆ ಈ ಮೂವರು ಹಿರಿಯ ಆಟಗಾರರಿಗೆ ಮತ್ತೆ ದೇಶೀಯ ಕ್ರಿಕೆಟ್ ನಿಂದ  ವಿನಾಯ್ತಿ ನೀಡಲಾಗಿದೆ. ಸೆಪ್ಟೆಂಬರ್ 5 ರಿಂದ ದುಲೀಪ್ ಟ್ರೋಫಿ ಟೂರ್ನಿ ಆರಂಭವಾಗಲಿದ್ದು, ಭಾರತದ ಮೂವರು ದಿಗ್ಗಜ ಆಟಗಾರರು ಆಡಬಹುದು ಎಂದು ಈ ಮೊದಲು ಊಹಾಪೋಹಗಳಿದ್ದವು. ಆದರೆ ಅದೆಲ್ಲಾ ಸುಳ್ಳಾಗಿದೆ.

ಈ ಮೂವರನ್ನು ಹೊರತುಪಡಿಸಿ ಕೆಎಲ್ ರಾಹುಲ್, ಶುಬ್ಮನ್ ಗಿಲ್, ರಿಷಬ್ ಪಂತ್ ರಂತಹ ಸ್ಟಾರ್ ಆಟಗಾರರು ದೇಶೀಯ ಟೂರ್ನಿಯಲ್ಲಿ ಆಡಲಿದ್ದಾರೆ. ಅದರಲ್ಲೂ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲು ಹವಣಿಸುತ್ತಿರುವ ರಿಷಬ್ ಪಂತ್, ಸರ್ಫರಾಜ್ ಖಾನ್, ಶುಬ್ಮನ್ ಗಿಲ್ ಮುಂತಾದ ಆಟಗಾರರಿಗೆ ಈ ದೇಶೀಯ ಟೂರ್ನಿ ಸಾಮರ್ಥ್ಯ ಸಾಬೀತುಪಡಿಸಲು ವೇದಿಕೆಯಂತಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments