ದುಬೈ: ಟಿ20 ವಿಶ್ವಕಪ್ ಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಟೀಂ ಇಂಡಿಯಾ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ನೀಡಲು ಐಪಿಎಲ್ ಫ್ರಾಂಚೈಸಿಗಳಿಗೆ ಬಿಸಿಸಿಐ ಸೂಚನೆ ನೀಡಿದೆ.
ಐಪಿಎಲ್ ಮುಗಿದ ತಕ್ಷಣವೇ ಟಿ20 ವಿಶ್ವಕಪ್ ಆರಂಭವಾಗಲಿದೆ. ಹೀಗಾಗಿ ಇದಕ್ಕೂ ಮೊದಲು ಸ್ಟಾರ್ ಆಟಗಾರರು ಗಾಯಗೊಂಡರೆ ಟೀಂ ಇಂಡಿಯಾಗೆ ಸಂಕಷ್ಟ ಎದುರಾಗಲಿದೆ.
ಹೀಗಾಗಿ ಈಗ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿರುವ ಸ್ಟಾರ್ ಆಟಗಾರರನ್ನು ಕೆಲವು ಪಂದ್ಯಗಳಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಸೂಚನೆ ನೀಡಿದೆ ಎನ್ನಲಾಗಿದೆ. ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಸೇರಿದಂತೆ ಪ್ರಮುಖ ಆಟಗಾರರು ಪ್ರಮಖವಲ್ಲದ ಐಪಿಎಲ್ ಪಂದ್ಯಗಳಿಂದ ವಿಶ್ರಾಂತಿ ಪಡೆಯಬಹುದಾಗಿದೆ.