Publish Date: Sun, 17 Oct 2021 (17:19 IST)
Updated Date: Sun, 17 Oct 2021 (17:20 IST)
ಮುಂಬೈ: ಟೀಂ ಇಂಡಿಯಾ ಕೋಚ್ ಮತ್ತು ಸಹಾಯಕ ಸಿಬ್ಬಂದಿ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ತನ್ನ ಅಧಿಕೃತ ಜಾಲತಾಣಗಳಲ್ಲಿ ಪ್ರಕಟಣೆ ನೀಡಿದೆ.
ಟೀಂ ಇಂಡಿಯಾ ಕೋಚ್, ಸಹಾಯಕ ಸಿಬ್ಬಂದಿ ಹಾಗೂ ಎನ್ ಸಿಎ ತರಬೇತುದಾರ ಹುದ್ದೆಗೆ ಬಿಸಿಸಿಐ ಹೊಸದಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಕ್ತ ವಿವರಗಳೊಂದಿಗೆ ಬಿಸಿಸಿಐ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಈಗಾಗಲೇ ಟೀಂ ಇಂಡಿಯಾ ಕೋಚ್ ಹುದ್ದೆಗೆ ಮಾಜಿ ನಾಯಕ ರಾಹುಲ್ ದ್ರಾವಿಡ್ ಹೆಸರು ಬಲವಾಗಿ ಕೇಳಿಬರುತ್ತಿದೆ. ರವಿಶಾಸ್ತ್ರಿಯಿಂದ ತೆರವಾಗಲಿರುವ ಸ್ಥಾನಕ್ಕೆ ದ್ರಾವಿಡ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಶಾಸ್ತ್ರಿ ಜೊತೆಗೆ ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಶ್ರೀಧರ್ ಕೂಡಾ ತಮ್ಮ ಅವಧಿ ಮುಗಿಸಲಿದ್ದಾರೆ. ಹೀಗಾಗಿ ಈ ಸ್ಥಾನಗಳಿಗೂ ಅರ್ಜಿ ಆಹ್ವಾನಿಸಲಾಗಿದೆ.