ಮುಂಬೈ: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಮುಗಿದ ಬಳಿಕ ಟೀಂ ಇಂಡಿಯಾ ಅಫ್ಘಾನಿಸ್ತಾನ ವಿರುದ್ಧ ಏಕದಿನ ಸರಣಿ ಆರಂಭವಾಗಲಿದೆ.
ಆದರೆ ಈ ಸರಣಿಗೆ ಬಿಸಿಸಿಐ ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ‍್ಯತೆಯಿದೆ.
ಇದೇ ವರ್ಷ ಏಕದಿನ ವಿಶ್ವಕಪ್ ನಡೆಯಲಿದೆ. ಹೀಗಾಗಿ ಆಟಗಾರರಿಗೆ ಸಾಕಷ್ಟು ವಿಶ್ರಾಂತಿ ನೀಡುವ ಸಾಧ‍್ಯತೆಯಿದೆ. ಈಗಾಗಲೇ ಐಪಿಎಲ್ ಆಡಿ ದಣಿದಿರುವ ಆಟಗಾರರು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಆಡಲು ಇಂಗ್ಲೆಂಡ್ ಗೆ ತೆರಳಲಿದ್ದಾರೆ. ಹೀಗಾಗಿ ಅದಾದ ಬಳಿಕ ತಂಡದ ಆಟಗಾರರು ಬ್ರೇಕ್ ಪಡೆಯಲಿದ್ದಾರೆ.