Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ನಮಗೆ ಏನೂ ಹೇಳಿಲ್ಲ: ಬಿಸಿಸಿಐ

Krishnaveni K
ಗುರುವಾರ, 8 ಫೆಬ್ರವರಿ 2024 (15:55 IST)
Photo Courtesy: Twitter
ಮುಂಬೈ: ಇಂಗ್ಲೆಂಡ್ ವಿರುದ್ಧ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ  ಟೀಂ ಇಂಡಿಯಾ ಸ್ಟಾರ್ ಬ್ಯಾಟಿಗ ವಿರಾಟ್ ಕೊಹ್ಲಿ ತಂಡಕ್ಕೆ ಮರಳುತ್ತರಾ ಎನ್ನುವುದು ಇನ್ನೂ ಖಚಿತವಾಗಿಲ್ಲ.

ಕೌಟುಂಬಿಕ ಕಾರಣ ನೀಡಿ ಕೊಹ್ಲಿ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದರು. ಮೂರನೇ ಟೆಸ್ಟ್ ಗೂ ಅವರು ಅಲಭ್ಯರಾಗಲಿದ್ದಾರೆ. ಆದರೆ ಕೊನೆಯ ಎರಡು ಪಂದ್ಯಗಳಿಗೆ ಲಭ್ಯರಾಗಬಹುದು ಎಂಬ ಸುದ್ದಿಗಳು ಹರಿಡಿತ್ತು. ಆದರೆ ಯಾವುದೂ ಅಧಿಕೃತವಾಗಿಲ್ಲ. ಅಂತಿಮ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಘೋಷಣೆಯೂ ಆಗಿಲ್ಲ.

ಬಿಸಿಸಿಐ ಅಧಿಕಾರಿಗಳ ಹೇಳಿಕೆ
ಈ ನಡುವೆ ಬಿಸಿಸಿಐ ಅಧಿಕಾರಿಗಳು ಕೊಹ್ಲಿ ಲಭ್ಯತೆ ಕುರಿತಾದ ಅನಿಶ್ಚಿತತೆಯ ಬಗ್ಗೆ ಮಾಧ‍್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇನ್ನೂ ಯಾವುದೂ ಅಂತಿಮವಾಗಿಲ್ಲ. ಕೊಹ್ಲಿ ತಾನು ಮುಂದಿನ ಪಂದ್ಯಗಳಿಗೆ ಲಭ್ಯರಿರುತ್ತಾರೆಯೇ ಎಂಬ ಬಗ್ಗೆ ನಮಗೆ ಇನ್ನೂ ಏನನ್ನೂ ಹೇಳಿಲ್ಲ ಎಂದು ಬಿಸಿಸಿಐ ಅಧಿಕಾರಿಗಳು ಹೇಳಿದ್ದಾರೆ.

ಇಂದು ಆಯ್ಕೆಗಾರರು ಟೀಂ ಇಂಡಿಯಾ ಪ್ರಕಟಿಸುವ ಸಾಧ‍್ಯತೆಯಿದೆ. ಆಯ್ಕೆ ಸಮಿತಿ ಕೊಹ್ಲಿ ಲಭ್ಯರಿರುತ್ತಾರೆ ಎನ್ನುವ ಭರವಸೆಯಲ್ಲಿದೆ. ಆದರೆ ಬಿಸಿಸಿಐ ಅಧಿಕಾರಿಗಳು ನಮಗೆ ಮಾಹಿತಿ ನೀಡಿಲ್ಲ ಎಂದಿದ್ದಾರೆ. ಒಂದು ವೇಳೆ ಕೊಹ್ಲಿ ಲಭ್ಯರಿರುತ್ತಾರೆ ಎಂದಾದರೆ ತಕ್ಷಣವೇ ಅವರು ತಂಡಕ್ಕೆ ಆಯ್ಕೆಯಾಗುವುದರಲ್ಲಿ ಎರಡು ಮಾತಿಲ್ಲ. ಆದರೆ ಸದ್ಯಕ್ಕೆ ಯಾವುದೇ ಮಾಹಿತಿಯಿಲ್ಲ ಎಂದಿದ್ದಾರೆ. ಈ ಮೂಲಕ ಮುಂದಿನ ಪಂದ್ಯಕ್ಕೆ ಕೊಹ್ಲಿ ಲಭ್ಯತೆ ಬಗ್ಗೆ ಇರುವ ಗೊಂದಲಗಳು ಮುಂದುವರಿದಿದೆ. ಅಂತಿಮವಾಗಿ ಇಂದು ಟೀಂ ಇಂಡಿಯಾ ಪ್ರಕಟಣೆಯಾಗುವಾಗ ಸ್ಪಷ್ಟತೆ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments