Webdunia - Bharat's app for daily news and videos

Install App

ವೆಚ್ಚ ಭರಿಸಲು ಇಸಿಬಿಗೆ ಮನವಿ ಮಾಡಿದ ಬಿಸಿಸಿಐ

Webdunia
ಶನಿವಾರ, 5 ನವೆಂಬರ್ 2016 (08:56 IST)
ಮುಂಬೈ: ರಾಜ್ ಕೋಟ್ ನಲ್ಲಿ ನವಂಬರ್ 9 ರಿಂದ ಪ್ರಾರಂಭವಾಗಲಿರುವ ಟೆಸ್ಟ್ ಸರಣಿಯ ಸಂದರ್ಭದಲ್ಲಿ ತಂಡಕ್ಕೆ ಬೇಕಾಗುವ ಎಲ್ಲಾ ಖರ್ಚು ವೆಚ್ಚಗಳನ್ನು ಭರಿಸುವಂತೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗೆ ಭಾರತೀಯ ಕ್ರಿಕೆಟ್ ಮಂಡಳಿ ಮನವಿ ಮಾಡಿದೆ.

ಸುಪ್ರೀಂ ಕೋರ್ಟ್ ನ ಆದೇಶದ ಹಿನ್ನೆಲೆಯಲ್ಲಿ ಲೋಧಾ ಸಮಿತಿಗೆ ಬಿಸಿಸಿಐ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ತಕ್ಷಣವೇ ಮುಚ್ಚಳಿಕೆ ಬರೆದುಕೊಡಬೇಕಿತ್ತು. ಆದರೆ ಅದನ್ನು ಮಾಡುವ ಮೊದಲು ಬಿಸಿಸಿಐ ಯಾವುದೇ ವೆಚ್ಚ ಮಾಡುವುದಕ್ಕೂ ನಿರ್ಬಂಧನೆ ಹೇರಲಾಗಿದೆ.  ಹೀಗಾಗಿ ಇಂಗ್ಲೆಂಡ್ ತಂಡಕ್ಕೆ ಅಗತ್ಯವಿರುವ ವ್ಯವಸ್ಥೆ ಮಾಡಿಕೊಡಲು ಖರ್ಚು ವೆಚ್ಚಗಳನ್ನು ಮಾಡಬಹುದೇ ಎಂದು ಬಿಸಿಸಿಐ ಲೋಧಾ ಸಮಿತಿಗೆ ಮನವಿ ಮಾಡಿತ್ತು.

ಆದರೆ ಲೋಧಾ ಸಮಿತಿ ಮುಚ್ಚಳಿಕೆ ನೀಡುವ ಆದೇಶ ಪಾಲನೆ ಮಾಡದೆ ಏನೂ ಮಾಡಲಾಗದು ಎಂದು ಖಡಾ ಖಂಡಿತವಾಗಿ ಹೇಳಿದ್ದರಿಂದ ಬಿಸಿಸಿಐ ಇಂಗ್ಲೆಂಡ್ ಕ್ರಿಕೆಟ್ ನಿಯಂತ್ರಣ ಮಂಡಳಿಗೇ ವೆಚ್ಚ ಪೂರೈಸಲು ಮನವಿ ಮಾಡಿದೆ.

ಈ ಕುರಿತು ಇಸಿಬಿ ಗೆ ಪತ್ರ ಬರೆದಿರುವ ಬಿಸಿಸಿಐ ಕೆಲವು ಕಾನೂನು ತೊಡಕುಗಳಿರುವುದರಿಂದ ವೆಚ್ಚ ನಿರ್ವಹಣೆಗೆ ತೊಡಕಾಗಿದೆ ಎಂದು ವಿವರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಮುಂದಿನ ಸುದ್ದಿ
Show comments