ಮುಂಬೈ: ಟೀಂ ಇಂಡಿಯಾದಲ್ಲಿ ಕಳಪೆ ಫಾರ್ಮ್ ನಿಂದಾಗಿ ಸಾಕಷ್ಟು ಟೀಕೆಗೊಳಗಾಗಿರುವ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಆಸ್ಟ್ರೇಲಿಯಾ ಸರಣಿಯ ನಡುವೆಯೇ ಕಠಿಣ ಸಂದೇಶ ಬಂದಿತ್ತು ಎನ್ನುವುದು ಈಗ ಬಯಲಾಗಿದೆ.
ಆಸ್ಟ್ರೇಲಿಯಾ ಸರಣಿಯಲ್ಲಿ ರೋಹಿತ್ ಮತ್ತು ಕೊಹ್ಲಿಯ ಕಳಪೆ ಫಾರ್ಮ್ ನಿಂದಾಗಿ ತಂಡದ ಬ್ಯಾಟಿಂಗ್ ತೀರಾ ಹದಗೆಟ್ಟಿತ್ತು. ಈ ಸರಣಿ ಸೋಲಿಗೆ ಬ್ಯಾಟಿಂಗ್ ವೈಫಲ್ಯವೇ ಕಾರಣವಾಗಿತ್ತು. ಹೀಗಾಗಿ ರೋಹಿತ್ ಮತ್ತು ಕೊಹ್ಲಿಯ ಬ್ಯಾಟಿಂಗ್ ವೈಫಲ್ಯ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.
ಈ ನಡುವೆ ಬಿಸಿಸಿಐನಿಂದಲೂ ಈ ಇಬ್ಬರು ಸ್ಟಾರ್ ಆಟಗಾರರಿಗೆ ಸಂದೇಶ ಬಂದಿತ್ತು ಎನ್ನಲಾಗಿದೆ. ಬಿಸಿಸಿಐಗೆ ನೂತನವಾಗಿ ಆಯ್ಕೆಯಾದ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮೂಲಕ ಕಠಿಣ ಸಂದೇಶ ರವಾನಿಸಿದ್ದರು ಎಂಬುದು ತಿಳಿದುಬಂದಿದೆ.
ನಿಮಗಿಬ್ಬರಿಗೆ ವಿಶೇಷ ರಿಯಾಯ್ತಿ ಏನೂ ಇಲ್ಲ ಎಂದು ಎಚ್ಚರಿಕೆ ನೀಡುವಂತೆ ಅಜಿತ್ ಅಗರ್ಕರ್ ಗೆ ಸಂದೇಶ ರವಾನಿಸಿದ್ದರು ಎಂದು ತಿಳಿದುಬಂದಿದೆ. ಈ ನಡುವೆ ಸಂದರ್ಶನವೊಂದರಲ್ಲಿ ಬಿಸಿಸಿಐ ಕಾರ್ಯದರ್ಶಿ ಹಿರಿಯ ಆಟಗಾರರಿಗೂ ಕಠಿಣ ಸಂದೇಶ ರವಾನಿಸಬೇಕಾಗಿದೆ ಎಂದಿದ್ದರು.