Publish Date: Tue, 19 Jul 2022 (09:20 IST)
Updated Date: Tue, 19 Jul 2022 (09:27 IST)
ಲಂಡನ್: ಟೀಂ ಇಂಡಿಯಾ ವಿರುದ್ಧ ಸರಣಿ ಸೋಲಿನ ಬೆನ್ನಲ್ಲೇ ಇಂಗ್ಲೆಂಡ್ ತಂಡದ ಪ್ರಮುಖ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಏಕದಿನ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ.
ಬಿಡುವಿಲ್ಲದ ಕ್ರಿಕೆಟ್ ನಿಂದಾಗಿ ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ಆಡುವುದು ಕಷ್ಟ ಎಂಬ ಕಾರಣಕ್ಕೆ ಬೆನ್ ಸ್ಟೋಕ್ಸ್ ವಿದಾಯ ಹೇಳಲು ಮುಂದಾಗಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಇಂದು ನಡೆಯಲಿರುವ ಏಕದಿನ ಪಂದ್ಯ ಅವರ ಪಾಲಿಗೆ ಕೊನೆಯ ಏಕದಿನ ಪಂದ್ಯವಾಗಲಿದೆ. ಇದುವರೆಗೆ 104 ಏಕದಿನ ಪಂದ್ಯವಾಡಿರುವ ಬೆನ್ ಸ್ಟೋಕ್ಸ್ 74 ವಿಕೆಟ್, 2919 ರನ್ ಗಳಿಸಿದ್ದಾರೆ.