Select Your Language

Notifications

webdunia
webdunia
webdunia
webdunia

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

Indian Cricket, Sri Lankan Cricket, Pacer Jasprit Bumrah
Photo Courtesy X
ಮುಂಬೈ: ಇದೇ ತಿಂಗಳಿನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಟೆಸ್ಟ್‌ ಸರಣಿಗೂ ಮುನ್ನ ಭಾರತ ತಂಡಕ್ಕೆ ಬಿಗ್‌ಶಾಕ್‌ ಎದುರಾಗಿದೆ. ತಂಡದ ಪ್ರಮುಖ ವೇಗಿ ತಂಡದಿಂದಲೇ ಹೊರಬಿದ್ದಿದ್ದಾರೆ,

ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಇದೇ ಆಗಸ್ಟ್ 15 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಟೀಂ ಇಂಡಿಯಾ ಇನ್ನೇರಡು ದಿನಗಳಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಶ್ರೀಲಂಕಾದ ಸ್ಥಳೀಯ ತಂಡದ ವಿರುದ್ಧ ಆಗಸ್ಟ್ 6 ರಿಂದ ಅಭ್ಯಾಸ ಪಂದ್ಯವನ್ನು ಆಡಲಿದೆ. ಈ ಸರಣಿಗಾಗಿ ಈಗಾಗಲೇ ತಂಡವನ್ನು ಸಹ ಪ್ರಕಟಿಸಲಾಗಿದೆ.

ಭಾರತ ತಂಡದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾರನ್ನು ಸಹ ಆಯ್ಕೆ ಮಾಡಲಾಗಿತ್ತು. ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಅವರು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ.

ಶ್ರೀಲಂಕಾ ಪ್ರವಾಸಕ್ಕೆ ತಂಡವನ್ನು ಪ್ರಕಟಿಸುವಾಗ ಜಸ್ಪ್ರೀತ್ ಬುಮ್ರಾ ಅವರ ಲಭ್ಯತೆಯ ಬಗ್ಗೆ ಮಾಹಿತಿ ನೀಡಿದ್ದ ಆಯ್ಕೆ ಸಮಿತಿ, ಶ್ರೀಲಂಕಾ ಪ್ರವಾಸಕ್ಕೆ ಬುಮ್ರಾರನ್ನು ಆಯ್ಕೆ ಮಾಡಲಾಗಿದೆಯಾದರೂ ಆಡುವ ಹನ್ನೊಂದರ ಬಳಗದಲ್ಲಿ ಅವರಿಗೆ ಸ್ಥಾನ ನೀಡುವುದು ಅವರ ಫಿಟ್ನೆಸ್ ಮೇಲೆ ಅವಲಂಬಿತವಾಗಿರಲಿದೆ ಎಂದಿತ್ತು. ಇದಕ್ಕೆ ಪೂರಕವಾಗಿ ಬುಮ್ರಾ ಇಂಜುರಿಯಿಂದ ಚೇತರಿಸಿಕೊಂಡು ಎನ್​​ಸಿಎ ನಡೆಸಿದ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾಗಿದ್ದು, ಶ್ರೀಲಂಕಾ ಪ್ರವಾಸಕ್ಕೆ ಲಭ್ಯರಿದ್ದಾರೆ ಎಂದು ಕೆಲವು ದಿನಗಳ ಹಿಂದೆ ವರದಿಯಾಗಿತ್ತು.

ಸರಣಿಗೆ ತಂಡ ಪ್ರವಾಸ ಕೈಗೊಳ್ಳುವುದಕ್ಕೂ ಮುನ್ನವೇ ಜಸ್ಪ್ರೀತ್ ಬುಮ್ರಾ ಈ ಸರಣಿಗೆ ಅಲಭ್ಯತೆರಾಗಲಿದ್ದಾರೆ ಎಂಬ ಸುದ್ದಿ ತಂಡಕ್ಕೆ ದೊಡ್ಡ ಹೊಡೆತ ನೀಡಿದೆ. ಮಾಹಿತಿ ಪ್ರಕಾರ, ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ನಡೆದ ಆರಂಭಿಕ ಪರೀಕ್ಷೆಯಲ್ಲಿ ಬುಮ್ರಾ ಅವರ ಎಡ ಮೊಣಕಾಲಿನಲ್ಲಿ ಸಮಸ್ಯೆ ಇರುವುದು ಬೆಳಕಿಗೆ ಬಂದಿದೆ. ಹೀಗಾಗಿ ವೈದ್ಯಕೀಯ ತಂಡವು ಬುಮ್ರಾರನ್ನು ಶ್ರೀಲಂಕಾಕ್ಕೆ ಕಳುಹಿಸುವ ಬದಲು ಪೂರ್ಣಾವಧಿಯ ಚೇತರಿಕೆಗೆ ಒಳಗಾಗುವಂತೆ ಸಲಹೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ