ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ಸರಣಿಗೆ ಮೊದಲು ಇಂಗ್ಲಿಷ್ ಕೌಂಟಿ ಕ್ರಿಕೆಟ್ ನಲ್ಲಿ ಆಡಲು ನಿರ್ಧರಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಕೊಹ್ಲಿ ಕೌಂಟಿ ಕ್ರಿಕೆಟ್ ತಂಡ ಸರ್ರೆ ಪರ ಆಡಲು ಎಲ್ಲಾ ಸಿದ್ಧತೆ ಮಾಡಿಕೊಂಡಿರುವ ಬೆನ್ನಲ್ಲೇ ಅಪಸ್ವರ ಕೇಳಿ ಬಂದಿದೆ.
									
			
			 
 			
 
 			
					
			        							
								
																	ಕೊಹ್ಲಿಗೆ ಕೌಂಟಿ ಕ್ರಿಕೆಟ್ ನಲ್ಲಿ ಆಡಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಇಂಗ್ಲೆಂಡ್ ನ ಮಾಜಿ ಬೌಲರ್ ಬಾಬ್ ವಿಲ್ಲಿಸ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊಹ್ಲಿಯಂತಹ ವಿದೇಶೀ ಸ್ಟಾರ್ ಆಟಗಾರರಿಗೆ ಅವಕಾಶ ನೀಡಿರುವುದರಿಂದ ಇಂಗ್ಲೆಂಡ್ ನ ಯುವ ಆಟಗಾರರಿಗೆ ಅವಕಾಶವಿಲ್ಲದಂತಾಗುತ್ತದೆ ಎಂದು ಅವರು ವಾದಿಸಿದ್ದಾರೆ.
									
										
								
																	ಅಷ್ಟೇ ಅಲ್ಲ, ಕೊಹ್ಲಿಯಂತಹ ವಿದೇಶೀ ಆಟಗಾರರಿಗೆ ಇಂಗ್ಲೆಂಡ್ ಪರಿಸ್ಥಿತಿಗೆ ಹೊಂದಿಕೊಳ್ಳಲು ಅವಕಾಶ ನೀಡುವುದು ಬಿಗ್ ನಾನ್ ಸೆನ್ಸ್ ಎಂದು ಅವರು ಕಿಡಿ ಕಾರಿದ್ದಾರೆ. ಐಪಿಎಲ್ ಮುಕ್ತಾಯವಾದ ಬಳಿಕ ಆಫ್ಘಾನಿಸ್ತಾನದ ವಿರುದ್ಧ ಟೀಂ ಇಂಡಿಯಾ ತವರಿನಲ್ಲಿ ಟೆಸ್ಟ್ ಸರಣಿ ಆಡಬೇಕಿದೆ. ಆದರೆ ಇದಕ್ಕೆ ಗೈರಾಗಿ ಕೊಹ್ಲಿ ಮತ್ತು ಕೆಲವು ಸ್ಪೆಷಲಿಸ್ಟ್ ಆಟಗಾರರು ಇಂಗ್ಲೆಂಡ್  ಗೆ ತೆರಳಲಿದ್ದಾರೆ ಎಂದು ಬಿಸಿಸಿಐ ಹೇಳಿದೆ.
									
											
							                     
							
							
			        							
								
																	ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ