ದುಬೈ: ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂದು ಟೀಂ ಇಂಡಿಯಾ ಮೊದಲ ಪಂದ್ಯವಾಡುತ್ತಿದ್ದು ಬಾಂಗ್ಲಾದೇಶ ಟಾಸ್ ಗೆದ್ದು ಅಚ್ಚರಿಯೆಂಬಂತೆ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ದುಬೈ ಮೈದಾನದಲ್ಲಿ ಮೊದಲು ಫೀಲ್ಡಿಂಗ್ ಮಾಡಿದ ತಂಡವೇ ಗೆದ್ದ ನಿದರ್ಶನವೇ ಹೆಚ್ಚು. ಹೀಗಾಗಿ ಟಾಸ್ ಗೆದ್ದ ತಂಡ ಮೊದಲು ಫೀಲ್ಡಿಂಗ್ ಮಾಡುವುದು ಉತ್ತಮ ಎಂದು ಅಂಕಿ ಅಂಶಗಳೇ ಹೇಳುತ್ತಿವೆ. ಇದರ ನಡುವೆ ಬಾಂಗ್ಲಾ ಬ್ಯಾಟಿಂಗ್ ಆಯ್ದುಕೊಂಡು ಅಚ್ಚರಿ ಮೂಡಿಸಿದೆ.
ಇನ್ನು ಟಾಸ್ ಸೋತ ಬಳಿಕ ಮಾತನಾಡಿರುವ ರೋಹಿತ್ ಶರ್ಮಾ ಒಂದು ವೇಳೆ ನಾವು ಟಾಸ್ ಗೆದ್ದಿದ್ದರೂ ನಾವು ಮೊದಲು ಫೀಲ್ಡಿಂಗ್ ಆಯ್ದುಕೊಳ್ಳುತ್ತಿದ್ದೆವು ಎಂದಿದ್ದಾರೆ. ಇನ್ನು, ಈ ಪಂದ್ಯದಲ್ಲಿ ಗಾಯದಿಂದ ಚೇತರಿಸಿಕೊಳ್ಳದ ಕಾರಣ ವರುಣ್ ಚಕ್ರವರ್ತಿ ಇಂದಿನ ಪಂದ್ಯದಲ್ಲಿ ಆಡುತ್ತಿಲ್ಲ.
ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್.