Webdunia - Bharat's app for daily news and videos

Install App

ಚಾಂಪಿಯನ್ಸ್‌ ಟ್ರೋಫಿ: ಟಾಸ್‌ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್‌ ಆಯ್ಕೆ: ಮುಯ್ಯಿ ತೀರಿಸಿಕೊಳ್ಳುವುದೇ ಭಾರತ

Sampriya
ಮಂಗಳವಾರ, 4 ಮಾರ್ಚ್ 2025 (14:16 IST)
Photo Courtesy X
ದುಬೈ: ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಮೊದಲ ಸೆಮಿಫೈನಲ್‌ ಇಂದು ನಡೆಯುತ್ತಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುತ್ತಿವೆ.

ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ,. ರೋಹಿತ್‌ ಶರ್ಮಾ ಪಡೆದ ಮೊದಲು ಫೀಲ್ಡಿಂಗ್‌ ನಡೆಸಲಿದೆ.

ಐಸಿಸಿ ಟೂರ್ನಿಗಳ ಇತಿಹಾಸ ನೋಡಿದಾಗ ಭಾರತ ತಂಡವು ಆಸ್ಟ್ರೇಲಿಯಾ ಎದುರು ನಾಕೌಟ್ ಹಂತದಲ್ಲೇ ಸೋತಿದ್ದು ಜಾಸ್ತಿ. ಭಾರತ ತಂಡವು ಐಸಿಸಿ ಟ್ರೋಫಿ ಟೂರ್ನಿಯ ನಾಕೌಟ್ ಹಂತದಲ್ಲಿ ಆಸ್ಟ್ರೇಲಿಯಾ ತಂಡವನ್ನು 2011ರ ವಿಶ್ವಕಪ್ ಕ್ವಾರ್ಟರ್‌ಫೈನಲ್‌ನಲ್ಲಿ ಸೋಲಿಸಿತ್ತು.

ಉಳಿದಂತೆ 2015ರ ಏಕದಿನ ವಿಶ್ವಕಪ್ ಸೆಮಿಫೈನಲ್‌, 2023ರ ಏಕದಿನ ವಿಶ್ವಕಪ್ ಫೈನಲ್‌ ಹಾಗೂ ಅದೇ ವರ್ಷ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಎದುರು ಭಾರತ ಮುಗ್ಗರಿಸಿತ್ತು. ಇದೀಗ ಮುಯ್ಯಿ ತೀರಿಸುವ ಅವಕಾಶ ಭಾರತದ ಮುಂದಿದೆ.

ಎರಡು ತಂಡಗಳು ಉತ್ತಮ ಫಾರ್ಮ್‌ನಲ್ಲಿದ್ದು ಟೂರ್ನಿಯಲ್ಲಿ ಅಜೇಯವಾಗಿ ಸೆಮಿಫೈನಲ್‌ ಪ್ರವೇಶಿಸಿವೆ. ಭಾರತ ತಂಡವು ಪಾಕಿಸ್ತಾನ ಮತ್ತು ಬಾಂಗ್ಲಾದೇಶ ವಿರುದ್ಧ ಸವಾರಿ ಮಾಡಿದೆ. ಆಸ್ಟ್ರೇಲಿಯಾ ತಂಡವು ಇಂಗ್ಲೆಂಡ್‌ ತಂಡವನ್ನು ಮಣಿಸಿದೆ. ದಕ್ಷಿಣ ಆಫ್ರಿಕಾ ಮತ್ತು ಅಫ್ಗಾನಿಸ್ಥಾನ ವಿರುದ್ಧ ಮಳೆಯಿಂದ ಪಂದ್ಯ ರದ್ದುಗೊಂಡಿತ್ತು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments